ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ 24 ನೂತನ ಸಚಿವರು ಶನಿವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ದೆಹಲಿಯಲ್ಲಿ ಸಿದ್ದರಾಮಯ್ಯ, ಅವರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರದಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಚಿವರ ಪಟ್ಟಿಗೆ ಸಹಿ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ- 1980ರ ದಶಕದ ಎಚ್‌ಜಿಯು-55/ಪಿ ಹೆಲ್ಮೆಟ್‌ಗೆ ಮುಕ್ತಿ: ಈಗಾಗಲೇ ಲಗ್ಗೆಯಿಟ್ಟಿವೆ 4+ ತಲೆಮಾರಿನ ಮಿಲಿಟರಿ ಪೈಲಟ್ ಹೆಲ್ಮೆಟ್‌ಗಳು


ಈಗಾಗಲೇ ಶನಿವಾರಂದು ನಡೆಯುವ ಸಚಿವರ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮದ ವಿಚಾರವಾಗಿ ರಾಜ್ಯಪಾಲರಿಗೆ ಕೆಪಿಸಿಸಿ ಮಾಹಿತಿ ನೀಡಿದೆ.ಶನಿವಾರ ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎನ್ನಲಾಗಿದೆ. ನೂತನ ಸಂಪುಟದ ರಚನೆಯಲ್ಲಿ ಜಾತಿ, ಪ್ರದೇಶವಾರು ಸಚಿವ ಸ್ಥಾನವನ್ನು ಹಂಚಿಕೆ ಮಾಡಲಾಗಿದ್ದು, ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​​​ ಬಣಕ್ಕೆ ಸಮಾನ ಪ್ರಾತಿನಿಧ್ಯ ನೀಡಲಾಗಿದೆ ಎಂದು ತಿಳಿದು ಬಂದಿದೆ.


ಹಿರಿಯ ಶಾಸಕರಿಗೆ ಕೈ ತಪ್ಪಿದ ಸಚಿವ ಸ್ಥಾನ:


ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿ ಲಾಭಿ ನಡೆಸಿದ್ದಆರ್.ವಿ.ದೇಶಪಾಂಡೆ, ಬಿ.ಕೆ.ಹರಿಪ್ರಸಾದ್​​​​ ಸೇರಿದಂತೆ ಹಲವು ಹಿರಿಯ ಶಾಸಕರಿಗೆ ನಿರಾಸೆಯಾಗಿದೆ.ಈ ಬಾರಿ ಸಚಿವ ಸಂಪುಟದಲ್ಲಿ ಕೆಲವು ಅಚ್ಚರಿ ಹೆಸರುಗಳು ಸೇರ್ಪಡೆ ಸಾಧ್ಯತೆ ಇದೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ