ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು, ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ರವಿ ರಘು ಮಗಳು ನಾಗರತ್ನ (ಬೋರಮ್ಮ) ಸೇರಿದಂತೆ ಕುಟುಂಬದ ಬಳಗವನ್ನು ಅಗಲಿದ್ದಾರೆ.
ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಹೊಸಹಳ್ಳಿಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ
ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ
— Basavaraj S Bommai (@BSBommai) August 26, 2022
ಈಗ ಸಿದ್ಧರಾಮಯ್ಯ ಅವರ ಸಹೋದರನ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ "ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ.ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿಃ" ಎಂದು ಕಂಬನಿ ಮಿಡಿದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.