ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರೇ ಆಪರೇಷನ್ ಜನಕ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಅವರು, ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದವರು. ಅಂದಿನಿಂದಲೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಆರಂಭವಾಗಿದ್ದು. ಹಾಗಾಗಿ ಸಿದ್ದರಾಮಯ್ಯ ಅವರೇ ಆಪರೇಷನ್ ಜನಕ. ಅಷ್ಟಕ್ಕೂ ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ ಎಷ್ಟು ಹಣ ಪಡೆದಿದ್ದರು ಎಂಬುದರ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಈಶ್ವರಪ್ಪ ಆಗ್ರಹಿಸಿದರು. 


ಮುಂದುವರೆದು ಮಾತನಾಡುತ್ತಾ, ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರ ಶಾಸಕರಿಂದಲೇ ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದ್ದರೂ ಸಹ ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ ಈಶ್ವರಪ್ಪ, ಆಪರೇಶನ್ ಕಮಲ ವಿಚಾರವಾಗಿ ಬಿಡುಗಡೆಯಾಗಿರುವ ಆಡಿಯೋ ಸಂಬಂಧ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದರು.