ವಿಜಯಪುರ : ದೇಶದ ಅತ್ಯುನ್ನತ ಪ್ರಶಸ್ತಿಯಾದ 'ಪದ್ಮಶ್ರೀ' ಪ್ರಶಸ್ತಿಯನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರು ನಿರಾಕರಿಸಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಮೇಲೆ ನನಗೆ ಅಪಾರ ಗೌರವವಿದೆ. ನಾನು ಓರ್ವ ಸರಳ ವ್ಯಕ್ತಿ. ನಾನು ಸಾಮಾನ್ಯ ಜೀವನವನ್ನು ನಡೆಸುತ್ತಾ ಆಧ್ಯಾತ್ಮಿಕ ಬೋಧನೆ ಮೂಲಕ ಜನರನ್ನು ಸುಖಮಯ ಜೀವನದತ್ತ ಕೊಂಡೊಯ್ಯುವ ಉದ್ದೇಶ ನನ್ನದು. ನನಗೆ ಯಾವುದೇ ಪ್ರಶಸ್ತಿಗಳ ಮೇಲೆ ಆಸಕ್ತಿಯಿಲ್ಲ ಎಂದು ಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. 


ಕೇಂದ್ರ ಸರ್ಕಾರವು ನನ್ನನ್ನು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನನಗೆ ಸಂತಸ ತಂದಿದೆ. ಆದರೆ, ನನಗೆ ಈ ಪ್ರಶಸ್ತಿಯನ್ನು ಸ್ವೀಕರಿಸಲು ಇಷ್ಟವಿಲ್ಲ ಎಂದು ಗೌರವಯುತವಾಗಿ ಪ್ರಶಸ್ತಿಯನ್ನು ನಿರಾಕರಿಸಿ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.


ಕೇಂದ್ರ ಸರ್ಕಾರದ ಬಗ್ಗೆ ನನಗೆ ಅಪಾರ ಗೌರವವಿದೆ. ಸಂತನಾದ ನನಗೆ ಪ್ರಶಸ್ತಿಗಳಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಈ ಪ್ರಶಸ್ತಿ ನನಗೆ ಬೇಡ. ನನ್ನ ನಿರ್ಧಾರವನ್ನು ತಾವು ಪ್ರಶಂಸಿಸುತ್ತೀರಿ ಎಂಬ ನಂಬಿಕೆಯಿದೆ ಎಂದು ಪ್ರಧಾನ ಮಂತ್ರಿಗೆ ಸಿದ್ಧೇಶ್ವರ ಸ್ವಾಮೀಜಿಗಳು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 


ಪದ್ಮಶ್ರೀ ಪ್ರಶಸ್ತಿಯು ಕಲೆ, ಶಿಕ್ಷಣ, ಕೈಗಾರಿಕೆ, ಸಾಹಿತ್ಯ, ವಿಜ್ಞಾನ, ಸಮಾಜಸೇವೆ ಮತ್ತು ಸಾರ್ವಜನಿಕ ಜೀವನವನ್ನು ಒಳಗೊಂಡಂತೆ ವಿವಿಧ ಕಾರ್ಯಕ್ಷೇತ್ರಗಳಲ್ಲಿ ಸಾಧನೆ ಮಾಡಿ ವಿಶೇಷ ಕೊಡುಗೆ ನೀಡುವ ಸಾಮಾನ್ಯ ಭಾರತಿಯ ನಾಗರಿಕರಿಗೆ ಗೌರವಪೂರ್ವಕವಾಗಿ ಭಾರತ ಸರ್ಕಾರ ನೀಡುವ ನಾಲ್ಕನೇ ಅತಿದೊಡ್ಡ ನಾಗರೀಕ ಪ್ರಶಸ್ತಿಯಾಗಿದೆ.