ಇಂದಿರಾ ಕ್ಯಾಂಟೀನ್ ಪುನಃಸ್ಥಾಪನೆಗೆ ಮುಂದಾದ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ನನ್ನು ಮತ್ತೊಮ್ಮೆ ಪುನಃಸ್ಥಾಪಿಸಲು ಮುಂದಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ನನ್ನು ಮತ್ತೊಮ್ಮೆ ಪುನಃಸ್ಥಾಪಿಸಲು ಮುಂದಾಗಿದೆ.
ಈ ಕುರಿತಾಗಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ ಎಂದು ಹೇಳಿದೆ.
Photo Gellery: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ಸಂಪುಟ ಸಭೆಯ ನಿರ್ಣಯಗಳು
"ಗರೀಬಿ ಹಟಾವೋ" ಘೋಷಣೆಯ ಮೂಲಕ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್ ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಸ್ವಸ್ಥ ಮತ್ತು ರುಚಿಕರವಾದ ಊಟ-ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ.ಹಸಿದವರ ಪಾಲಿಗೆ ಅನ್ನವೇ ದೇವರು ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.