ಬೆಂಗಳೂರು : ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ನಗರದ 59ನೇ ಎಸಿಎಂಎಂ ನ್ಯಾಯಾಲಯವು ತಡೆ ಆದೇಶ ನೀಡಿದೆ.


COMMERCIAL BREAK
SCROLL TO CONTINUE READING

ಸಿದ್ದರಾಮಯ್ಯ ಅವರ ಮಗ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆಗೆ ತಡೆ ನೀಡಬೇಕೆಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಪುಸ್ತಕ ಬಿಡುಗಡೆ, ಪ್ರಸಾರ, ಪುಸ್ತಕ‌ ಸಂಬಂಧಿಸಿದಂತೆ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. 


ಇದನ್ನೂ ಓದಿ : ಗೃಹ ಸಚಿವರ ಮನೆ ಅಥವಾ ಸಿಎಂ ಮನೆಯಲ್ಲಿ ಹುಡುಕಿದ್ರೆ ಸ್ಯಾಂಟ್ರೋ ರವಿ ಸಿಗಬಹುದು: ಕಾಂಗ್ರೆಸ್


ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಪುಸ್ತಕ ಬಿಡುಗಡೆ ಸಂಬಂಧ ಸಚಿವ ಅಶ್ವತ್ ನಾರಾಯಣ ವಿರುದ್ದ ಅರ್ಜಿ ಸಲ್ಲಿಸಿದ್ದರು.  


ಆರೋಪಿಗಳು ಈಗಾಗಲೇ ಸಿದ್ದು ನಿಜ ಕನಸುಗಳ ಹೆಸರಿನಲ್ಲಿ ಪುಸ್ತಕವನ್ನು ಮುದ್ರಿಸಿದ್ದಾರೆ. ಯತೀಂದ್ರ ಮತ್ತು ಸಿದ್ದರಾಮಯ್ಯ ಲಿಖಿತ ಒಪ್ಪಿಗೆಯಿಲ್ಲದೆ ಪುಸ್ತಕ ಮುದ್ರಿಸಿದ್ದಾರೆ. ಪುಸ್ತಕದಲ್ಲಿ ಯತೀಂದ್ರ ಹಾಗೂ ಸಿದ್ದರಾಮಯ್ಯ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ಒಳಗೊಂಡಿದೆ. ಹೇಳಿದ ಪುಸ್ತಕವನ್ನು ಬಿಡುಗಡೆ ಮಾಡಿದರೆ, ಯತೀಂದ್ರ ಮತ್ತು ಸಿದ್ದರಾಮಯ್ಯ ಘನತೆಗೆ ಧಕ್ಕೆಯಾಗಲಿದೆ. ಆದ್ದರಿಂದ, ಜಾಹೀರಾತು ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು.


ಇದನ್ನೂ ಓದಿ : ದಕ್ಷಿಣ ಭಾರತದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗಮನ ಸೆಳೆದ ಪುಷ್ಪ ಪ್ರದರ್ಶನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.