ರಾತ್ರಿ ವೇಳೆ ಬಿಬಿಎಂಪಿಯಿಂದ ಸಿಲ್ಕ್ ಬೋರ್ಡ್ ಕಾಮಗಾರಿ ಪರಿಶೀಲನೆ

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹಾಗೂ ಅಧಿಕಾರಿಗಳು, ರಾತ್ರಿ ವೇಳೆ ಸಿಲ್ಕ್ ಬೋರ್ಡ್ ಜಂಕ್ಷನ್ ಕಾಮಗಾರಿ ಪರಿಶೀಲನೆ ನಡೆಸಿದರು. 

Written by - Sowmyashree Marnad | Edited by - Manjunath N | Last Updated : Jul 24, 2022, 01:16 AM IST
  • ಬಸ್ ನಿಲ್ದಾಣದ ಬಳಿಯ ಸರ್ವೀಸ್ ರಸ್ತೆಯಲ್ಲಿ ಹೆಚ್ಚು ನೀರು ನಿಲ್ಲುತ್ತಿದ್ದು,
  • ತಾತ್ಕಾಲಿಕವಾಗಿ ಪಂಪ್ ಅಳವಡಿಸಿ ರಾಜಕಾಲುವೆಗೆ ನೀರು ಹರಿದು ಹೋಗುವಂತೆ ಮಾಡಲು ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದರು.
ರಾತ್ರಿ ವೇಳೆ ಬಿಬಿಎಂಪಿಯಿಂದ ಸಿಲ್ಕ್ ಬೋರ್ಡ್ ಕಾಮಗಾರಿ ಪರಿಶೀಲನೆ  title=

ನವದೆಹಲಿ: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಹಾಗೂ ಅಧಿಕಾರಿಗಳು, ರಾತ್ರಿ ವೇಳೆ ಸಿಲ್ಕ್ ಬೋರ್ಡ್ ಜಂಕ್ಷನ್ ಕಾಮಗಾರಿ ಪರಿಶೀಲನೆ ನಡೆಸಿದರು. 

ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಬಿ.ಎಂ‌.ಆರ್.ಸಿ.ಎಲ್ ವತಿಯಿಂದ ಡಾಂಬರೀಕರಣ ಮಾಡಲಾಗಿದೆ. ಮಳೆಯಾಗುವ ಸಮಯದಲ್ಲಿ ರಸ್ತೆ ಮೇಲೆ ಮಳೆ ನೀರು ನಿಲ್ಲುತ್ತಿದ್ದು, ಡೈವರ್ಷನ್ ಮಾಡಿ ರಸ್ತೆ ಮೇಲೆ ಮಳೆ‌ ನೀರು ನಿಲ್ಲದಂತೆ ಮಾಡಬೇಕು.ಬಸ್ ನಿಲ್ದಾಣದ ಬಳಿಯ ಸರ್ವೀಸ್ ರಸ್ತೆಯಲ್ಲಿ ಹೆಚ್ಚು ನೀರು ನಿಲ್ಲುತ್ತಿದ್ದು, ತಾತ್ಕಾಲಿಕವಾಗಿ ಪಂಪ್ ಅಳವಡಿಸಿ ರಾಜಕಾಲುವೆಗೆ ನೀರು ಹರಿದು ಹೋಗುವಂತೆ ಮಾಡಲು ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ

ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಬಸ್ ನಿಲ್ದಾಣದಲ್ಲಿ ಡಾಂಬರೀಕರಣ, ದೀಪಗಳು ಹಾಗೂ ಶೌಚಾಲಯ ನಿರ್ಮಾಣ ಸೇರಿದಂತೆ ಬಾಕಿಯಿರುವ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಿ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರಲು ಬಿ.ಎಂ.ಆರ್.ಸಿ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.

*ಈ ವೇಳೆ ವಲಯ ಆಯುಕ್ತರಾದ ಡಾ. ಹರೀಶ್ ಕುಮಾರ್, ಜಯರಾಮ್ ರಾಯಪುರ, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಪರಶುರಾಮ್ ಶಿನ್ನಾಳ್ಕರ್, ಮುಖ್ಯ ಇಂಜಿನಿಯರ್ ಗಳಾದ ನರಸಾರಾಮ್ ರಾವ್, ಪ್ರಹ್ಲಾದ್, ಶಶಿಕುಮಾರ್, ಬಸವರಾಜ್ ಕಬಾಡೆ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News