ಬೆಂಗಳೂರು: ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ. ದಿವಂಗತ ಎಂ.ಸಿ.ಮನಗೂಳಿ ಪುತ್ರ ಅಶೋಕ್ ಮನಗೂಳಿ ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ಅಲ್ಲಂ ವೀರಭದ್ರಪ್ಪ, ಶಿವಾನಂದ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


HD Revanna: ಮತ್ತೊಂದು CD ಸ್ಫೋಟ: ಸದನದಲ್ಲಿ CD ತೋರಿಸಿದ ಎಚ್.ಡಿ.ರೇವಣ್ಣ!


ಇನ್ನು ಜೆಡಿಎಸ್‌ ಮೊದಲಿಗೆ ಈ ಬೈಲೆಕ್ಷನ್‌ನ್ ನಮ್ಮ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಹೇಳಿತ್ತು. ಬಳಿಕ ಇಲ್ಲ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅಶೋಕ್ ಮನಗೂಳಿ(Ashok Managuli) ಅವರನ್ನೇ ಕಣಕ್ಕಿಳಿಸಲು ಪ್ಲಾನ್ ಮಾಡಿತ್ತು. ಆದ್ರೆ, ಅಶೋಕ್ ಅವರು ಇದೀಗ ಕಾಂಗ್ರೆಸ್ ಸೇರಿದ್ದು ದಳಪತಿಗಳಿಗೆ ಬಿಗ್ ಶಾಕ್ ಆದಂತಾಗಿದೆ.


BJP: ಆಪರೇಷನ್ ಕಮಲ ಸಕ್ಸಸ್: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ!


ಮನಗೂಳಿ ಮೊದಲೇ ಹೇಳಿದ್ರಾ? ನಿಧನಕ್ಕೂ ಮೊದಲು ಎಂ.ಸಿ ಮನಗೂಳಿ(MC Managuli) ನಮ್ಮನ್ನ ಭೇಟಿ ಮಾಡಿದ್ದರು. ಅವರು ಸಾವನ್ನಪ್ಪುವ 15 ದಿನ ಮುಂಚೆ ನಮ್ಮನ್ನ ಭೇಟಿ ಮಾಡಿ ಮಗನನ್ನ ನಿಮ್ಮ ತೆಕ್ಕೆಗೆ ಹಾಕ್ತಿದ್ದೇನೆ ಎಂದು ಹೇಳಿದ್ದರು. ತುಂಬಾ ನೋವಿನಿಂದ ಹೇಳಿ ಹೋಗಿದ್ದರು ಎಂದು ಡಿಕೆ ಶಿವಕುಮಾರ್ ಈ ಹಿಂದಿನ ಮಾತುಗಳನ್ನು ಮೆಲುಕು ಹಾಕಿದರು.


Karnataka State: 'ಸರ್ಕಾರಿ ಮಹಿಳಾ ಉದ್ಯೋಗಿ'ಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌!


ಯಾವ ಷರತ್ತೂ ಇಲ್ಲದೇ ಕಾಂಗ್ರೆಸ್ ಸೇರುತ್ತೇನೆ ಎಂದು ಅಶೋಕ್ ಹೇಳಿದ್ದರು. ಯಾವಾಗ ಬೇಕಾದರೂ ಉಪಚುನಾವಣೆ(By Poll) ಬರಬಹುದು. ಪಕ್ಷದಲ್ಲಿ ಎಲ್ಲರೂ ಒಪ್ಪಿದ ಬಳಿಕ ಸೇರ್ಪಡೆ ಮಾಡಿಕೊಂಡಿದ್ದೇವೆ. ಅಲ್ಲಂ ವೀರಭದ್ರಪ್ಪ ನೇತೃತ್ವದ ಪಕ್ಷ ಸೇರ್ಪಡೆ ಸಮಿತಿಯ ಶಿಫಾರಸು ಆಧರಿಸಿ ಸೇರಿಸಿಕೊಳ್ತಿದ್ದೇವೆ. ಇದಕ್ಕೆ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರು ಎಲ್ಲರೂ ಒಪ್ಪಿಗೆ ಕೊಟ್ಟ ನಂತರವೇ ಸೇರ್ಪಡೆ ಮಾಡಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.


7th Pay Commission: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:'3 ಕಂತುʼಗಳಲ್ಲಿ DA ಜುಲೈನಿಂದ ಬಿಡುಗಡೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.