ಗೌರಿ ಲಂಕೇಶ್ ಹತ್ಯೆ ಪ್ರಕರಣ: 9 ಸಾವಿರಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್​ಐಟಿ

2017ರ ಸೆಪ್ಟೆಂಬರ್ 5 ರಂದು ಗೌರಿ ಲಂಕೇಶ್ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಬಳಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ಗೆ ಆದೇಶಿಸಿತ್ತು.

Last Updated : Nov 23, 2018, 06:32 PM IST
ಗೌರಿ ಲಂಕೇಶ್ ಹತ್ಯೆ ಪ್ರಕರಣ: 9 ಸಾವಿರಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್​ಐಟಿ  title=

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9235 ಪುಟಗಳ ಆರೋಪಪಟ್ಟಿಯನ್ನು ಎಸ್ಐಟಿ ಪೊಲೀಸರು ಕೋಕಾ (Karnataka Control of Crimes Act) ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. 

ಈ ಪ್ರಕರಣದಲ್ಲಿ 18 ಮಂದಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, 16 ಬಂಧಿತರು ಮತ್ತು ಇಬ್ಬರು ಆರೋಪಿಗಳು ನಾಪತ್ತೆಯಾಗಿರುವುದಾಗಿ ಎಸ್ಐಟಿ ಪೊಲೀಸರು ಉಲ್ಲೇಖಿಸಿದ್ದಾರೆ. ಸುಮಾರು 450ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಯನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಗೆ ಅನುಮತಿ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದ್ದು, ಮತ್ತಷ್ಟು ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ ಎಂದು ವಿಶೇಷ ತನಿಖಾ ತಂಡ ಹೇಳಿದೆ. 

2017ರ ಸೆಪ್ಟೆಂಬರ್ 5 ರಂದು ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ (55) ಅವರ ಮೇಲೆ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಬಳಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ಗೆ ಆದೇಶಿಸಿತ್ತು. ಅದರಂತೆ ಕಳೆದ ಒಂದು ವರ್ಷದಿಂದ ಎಸ್ಐಟಿ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.

Trending News