ಹಿಜಾಬ್ ಧರಿಸಿ ಬಂದ ಆರು ವಿದ್ಯಾರ್ಥಿನಿಯರು ಅಮಾನತು ..!
ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇಲ್ಲಿ 6 ಹುಡುಗಿಯರು ಹಿಜಾಬ್ ಇಲ್ಲದೆ ತರಗತಿಗೆ ಹಾಜರಾಗಲು ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ.
ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನೂ ಮುಂದುವರೆದಿದೆ. ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ಬರುತ್ತಿದ್ದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಘಟನೆ ನಡೆದಿದೆ.
ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇಲ್ಲಿ 6 ಹುಡುಗಿಯರು ಹಿಜಾಬ್ ಇಲ್ಲದೆ ತರಗತಿಗೆ ಹಾಜರಾಗಲು ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ. ಈ ವಿದ್ಯಾರ್ಥಿಗಳು ನಿರಂತರ ಸೂಚನೆಯ ಬಳಿಕವೂ ಹಿಜಾಬ್ ಧರಿಸದೇ ತರಗತಿಯಲ್ಲಿ ಕುಳಿತುಕೊಳ್ಳಲು ಸಿದ್ದರಿರಲಿಲ್ಲ ಎನ್ನಲಾಗಿದೆ.
ಇದನ್ನೂ ಓದಿ : 'ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ'
ಇದಾದ ಬಳಿಕ ಕಾಲೇಜು ಆಡಳಿತ ಮಂಡಳಿ ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಬಳಿಕ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ. ಈ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಆಗಮಿಸುತ್ತಿರುವುದರ ವಿರುದ್ದ ಅಸಮಾಧಾನಗೊಂಡಿದ್ದ ಇತರ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಇದು
ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಕಾರಣದಿಂದ ಕಾಲೇಜಿನಲ್ಲಿ ಉಪನ್ಯಾಸಕರ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಏನು ಹೇಳಿತ್ತು ಹೈಕೋರ್ಟ್?
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದು ಕೋರ್ಟ್ ಹೇಳಿತ್ತು. ಈ ಮೂಲಕ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನೂ ನ್ಯಾಯಾಲಯ ವಜಾಗೊಳಿಸಿತ್ತು.
ಇದನ್ನೂ ಓದಿ : ಐಪಿಎಲ್‌ನಿಂದ ಹೆಚ್ಚಾಯ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ: 29 ಕೇಸ್, 33 ಆರೋಪಿಗಳು ಅರೆಸ್ಟ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.