ರಾಮನಗರ: ಕೊರೊನಾ ಲಸಿಕೆ ಕಾರ್ಯ ಮಂದಗತಿಯಲ್ಲಿ ಸಾಗುತ್ತಿರುವುದು ಸರ್ಕಾರದ ವೈಪಲ್ಯಕ್ಕೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಡಿಕೆಶಿವಕುಮಾರ್(DK Shivakumar) ಅವರು" ಇಂದು ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ₹100ರೂಗೆ ತಲುಪಿದೆ, ಅದೇ ರೀತಿಯಾಗಿ ಅಡುಗೆ ಎಣ್ಣೆ ಬೆಲೆ ಲೀಟರ್ ₹220 ತಲುಪಿದೆ. ಇನ್ನೊಂದೆಡೆಗೆ ಈಗಾಗಲೇ ಲಸಿಕೆ ಅಭಿಯಾನ ಆರಂಭವಾಗಿ 5 ತಿಂಗಳಾದರೂ ಕೇವಲ 3.17% ರಷ್ಟು ಜನರಿಗೆ ಮಾತ್ರ ಕೊರೊನಾ ಲಸಿಕೆ ಹಾಕಲಾಗಿದೆ. ಇದು ಸರ್ಕಾರವು ವೈಫಲ್ಯಕ್ಕೆ ಇದೊಂದು ಸ್ಪಷ್ಟ ನಿದರ್ಶನ ಎಂದು ಹೇಳಿದ್ದಾರೆ.
ಇದನ್ನೂ ಓದಿ : Vaccination Fear In Village: ವ್ಯಾಕ್ಸಿನ್ ಭಯದಿಂದ ನದಿಗೆ ಹಾರಿದ ಗ್ರಾಮೀಣ ಜನ, ಲಸಿಕೆ ಹಾಕಿಸಿಕೊಂಡಿದ್ದು ಕೇವಲ 14 ಜನ ಮಾತ್ರ
ಇದೇ ವೇಳೆ ಕಾಂಗ್ರೆಸ್ ಪಕ್ಷವು ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು" ಯಾವುದೇ ಜಾತಿ ಧರ್ಮಗಳನ್ನೂ ನೋಡದೆ ಕಾಂಗ್ರೆಸ್ ಪಕ್ಷವು ಎಲ್ಲಾ ಜನರಿಗೆ ಉಚಿತ ಲಸಿಕೆಯನ್ನು ಹಾಕುತ್ತಿದೆ. ನಿನ್ನೆಯಷ್ಟೇ ದಾವಣಗೇರಿಯಲ್ಲಿ ಮೂರು ಲಕ್ಷ ಜನರಿಗೆ ಲಸಿಕೆ ಹಾಕುವ ಕೆಲಸಕ್ಕೆ ಚಾಲನೆ ನೀಡಿದೆ.
ಇದನ್ನೂ ಓದಿ : Lockdown Extended : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್‌ಡೌನ್ ವಿಸ್ತರಣೆ..!
ಆದರೆ ಇನ್ನೊಂದೆಡೆಗೆ ಸಂಸದ್ ತೇಜಸ್ವಿ ಸೂರ್ಯ ಪ್ರತಿಚಿಕಿತ್ಸೆಗೆ 900 ರೂ ಗಳನ್ನ ನಿಗದಿಪಡಿಸಿದ್ದಾರೆ. ಎಂದು ವಾಗ್ದಾಳಿ ನಡೆಸಿದರು. ಇನ್ನೂ ಮುಂದುವರೆದು ಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಲಸಿಕಾ ಯೋಜನೆಯನ್ನು ಪರಿಗಣಿಸಿ ,ಇಡೀ ರಾಜ್ಯಾದ್ಯಂತ ಬಿಜೆಪಿ ಸರ್ಕಾರವು ಕಾಂಗ್ರೆಸ್ ನ ಲಸಿಕಾ ಯೋಜನೆಗೆ ಅನುಮತಿ ನೀಡಿದರೆ, ಇಡೀ ರಾಜ್ಯಾದ್ಯಂತ ಉಚಿತ ಲಸಿಕೆ ಹಾಕುವ ₹100 ಕೋಟಿ ಯೋಜನೆ ಜಾರಿಗೆ ತಯಾರಿದ್ದೇವೆ ಎಂದು ತಿಳಿಸಿದರು .
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.