ಹಾಸನ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ಉಂಟಾಗಿದ್ದ ಪ್ರವಾಹದಿಂದಾಗಿ ಸಂಪೂರ್ಣ ಹದಗೆಟ್ಟಿದ್ದ ಶಿರಾಡಿ ಘಾಟ್ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ಲಹುವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. 


COMMERCIAL BREAK
SCROLL TO CONTINUE READING

ಅಲ್ಲದೆ, ಚಾರ್ಮಾಡಿ ಘಾಟ್'ನಲ್ಲಿಯೂ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರಿಗೆ ಹೋಗಲು ದಾರಿಯೇ ಇಲ್ಲದಂತಾಗಿತ್ತು. ಆದರೆ ಆ ರಸ್ತೆಯನ್ನು ಕೆಲ ದಿನಗಳ ಹಿಂದೆ ಸರಿಪಡಿಸಲಾಗಿತ್ತು. ಈಗ ಶಿರಾಡಿ ಘಾಟ್ ರಸ್ತೆ ಸರಿಪಡಿಸಿ ಮೊದಲ ಹಂತದಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. 


ಈ ಹಿಂದೆ ಭಾರೀ ಮಳೆಯಾಗಿ, ಗುಡ್ಡ ಕುಸಿತ, ಭೂ ಕುಸಿತವಾದ ಹಿನ್ನೆಲೆಯಲ್ಲಿ ಅನಿರ್ಧಿಷ್ಟಾವಧಿಗೆ ಶಿರಾಡಿ ಘಾಟ್'ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆದರೆ, ಈಗ ರಸ್ತೆ ಸರಿಪಡಿಸಿ ಕೇವಲ ಲಘು ವಾಹನಗಳಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ದೊಡ್ಡ ವಾಹನ ಸಂಚಾರ ನಿಷೇಧಿಸಲಾಗಿದೆ.