ಕಡಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ತಂದೆಯೊಂದಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಕಚ್ಚಿದ ಹಾವು...
ಹುಬ್ಬಳ್ಳಿ: ತಂದೆಯೊಂದಿಗೆ ಹೊಲದಲ್ಲಿ ಕೆಲಸ ಮಾಡುತ್ತಿದ ಯುವಕನಿಗೆ ಹಾವು ಕಚ್ಚಿದ್ದು, ಕೂಡಲೇ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ ಚಿಕಿತ್ಸೆಗಾಗಿ ದಾಖಲಾದ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ತಂದೆ ಮಗ ಇಬ್ಬರು ಶೇಂಗಾ ಕೀಳಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಾವು ಕಚ್ಚಿಸಿ ಕೊಂಡ ಯುವಕ ಫಕ್ಕೀರಪ್ಪ ಅಣ್ಣಿಗೇರಿ ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ನಕ್ಷತ್ರ ಆಮೆ ಸಾಗಣೆ: ಮೂವರ ಬಂಧನ
ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕ ತನ್ನ ತಂದೆ ಜೊತೆ ಶೇಂಗಾ ಕೀಳಲು ಹೋಗಿದ್ದ. ಈ ವೇಳೆ ಫಕ್ಕೀರಪ್ಪ ಅಣ್ಣಿಗೇರಿ ಅವರಿಗೆ ಹಾವು ಕಚ್ಚಿದೆ. ಕೂಡಲೇ ಹಾವಿನ ತಲೆ ಜಜ್ಜಿ ಕೊಂದಿರುವ ಯುವಕ ನಂತರ ತಂದೆ ಜೊತೆ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗಿದ್ದಾನೆ.
ಇದನ್ನೂ ಓದಿ- ಒಂದು ದೇಶ ಒಂದು ಚುನಾವಣೆಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯ
ಆಸ್ಪತ್ರೆಗೆ ಬಂದೊಡನೆ ಮೃತ ವೈದ್ಯರಿಗೆ ಹಾವನ್ನ ತೋರಿಸಿ, ಇದೆ ಹಾವು ಕಚ್ಚಿದೆ ಚಿಕಿತ್ಸೆ ಕೊಡಿ ಎಂದು ದಾಖಲಾಗಿದ್ದಾನೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.