ಬೆಂಗಳೂರು: ಸಮಾಜದ ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದಾಗಲೇ ಸಾಮಾಜಿಕ ನ್ಯಾಯ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಇದೇ ನಮ್ಮೆಲ್ಲರ ಒಮ್ಮತದ ಬೇಡಿಕೆಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.


ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ-ಸಿದ್ದರಾಮಯ್ಯ


COMMERCIAL BREAK
SCROLL TO CONTINUE READING

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತಾದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತಾದ ಸಮಾಲೋಚನಾ ಸಭೆಯಲ್ಲಿ...

Posted by Siddaramaiah on Sunday, 18 October 2020

ಸಿದ್ಧರಾಮಯ್ಯ ಅವರ ಮಾಧ್ಯಮ ಹೇಳಿಕೆಯ ಮುಖ್ಯಾಂಶಗಳು:


  • ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಜಾರಿಗೆ ತರುವ ಜವಾಬ್ದಾರಿಯನ್ನು ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ವಹಿಸಿಕೊಂಡಿದ್ದಾರೆ. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟಿದ್ದೇವೆ, ಇದಕ್ಕಾಗಿ ಹೋರಾಟ ಮಾಡುವ ಅಗತ್ಯ ಬರಲಾರದೆಂದು ನಂಬಿದ್ದೇವೆ.

  • ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳನ್ನು ನಾವು ಭೇಟಿ ಮಾಡಿ ಒತ್ತಾಯಿಸಲಿದ್ದೇವೆ. ಇದರ ಜೊತೆಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವನ್ನು ಪುನರ್ರಚಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಆಗ್ರಹಿಸುತ್ತೇವೆ. ಈ ಸಮೀಕ್ಷೆ ಹಿಂದುಳಿದ ಜಾತಿಗಳಿಗೆ ಸೀಮಿತವಾದುದಲ್ಲ. ಅದು ಸಮಾಜದಲ್ಲಿರುವ ಎಲ್ಲ ಜಾತಿಗಳ ಸಮೀಕ್ಷೆ. ಅದನ್ನು ಒಪ್ಪಿಕೊಂಡು ವೈಜ್ಞಾನಿಕ ರೀತಿಯಲ್ಲಿ ಜಾರಿಗೆ ತಂದರೆ ಎಲ್ಲ ಜಾತಿ-ಧರ್ಮಗಳಿಗೂ ಒಳಿತಾಗುತ್ತದೆ. 

  • ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಸಮೀಕ್ಷೆಗೆ ಚಾಲನೆ ನೀಡಿದ್ದೇ ನಮ್ಮ ಸರ್ಕಾರ. ಆದರೆ ನಮ್ಮ ಆಡಳಿತಾವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೆ ನಾವೇ ಅನುಷ್ಠಾನಕ್ಕೆ ತರುತ್ತಿದ್ದೆವು. ಪೂರ್ಣಗೊಂಡಿಲ್ಲದ ಕಾರಣ ನಮಗೆ ಅದನ್ನು ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ.

  • ಕುರುಬರು ಮಾತ್ರವಲ್ಲ ಪರಿಶಿಷ್ಟ ಪಂಗಡದ ಗುಣಲಕ್ಷಣಗಳನ್ನು ಹೊಂದಿರುವ ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬುದು ನನ್ನ ಅಭಿಪ್ರಾಯ. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರ ಗಂಗಾಮತಸ್ಥರು, ಗೊಲ್ಲರು ಮತ್ತು ಗೊಂಡ-ರಾಜಾಗೊಂಡ ಸಮುದಾಯಗಳನ್ನು ಎಸ್‌.ಟಿ ಗೆ ಸೇರಿಸಬೇಕೆಂದು ಶಿಫಾರಸು ಮಾಡಿದ್ದೆ. ಗೊಲ್ಲರು, ಗಂಗಾಮತಸ್ಥರು, ಗೊಂಡರಂತೆ ಕುರುಬರು ಕೂಡಾ ತಮ್ಮನ್ನು ಎಸ್.ಟಿ ಗೆ ಸೇರಿಸಬೇಕೆಂದು ಕೇಳುತ್ತಾ ಬಂದಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಕುರುಬರು ಎಸ್.ಟಿ ಗೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್.ಟಿ ಗೆ ಸೇರಿಸಬೇಕೆಂದು ಕುರುಬರು ಬೇಡಿಕೆ ಇಟ್ಟಿದ್ದಾರೆ.

  • ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ವಿರೋಧ ಇಲ್ಲ. ನಮ್ಮ ಸರ್ಕಾರ ಎಸ್‌ಸಿಪಿ-ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಿದಾಗ ಪರಿಶಿಷ್ಟ ಜಾತಿಯವರಿಗೆ 17.1% ಮತ್ತು ಪರಿಶಿಷ್ಟ ಪಂಗಡಕ್ಕೆ 6.95% ನಷ್ಟು ಮೀಸಲಾತಿ ಕಲ್ಪಿಸಿದ್ದೆವು. ಆದ್ದರಿಂದ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 7.5%ಕ್ಕೆ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ.

  •  ಸಮಾಜದ ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದಾಗಲೇ ಸಾಮಾಜಿಕ ನ್ಯಾಯ ಸಂಪೂರ್ಣವಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಇದೇ ನಮ್ಮೆಲ್ಲರ ಒಮ್ಮತದ ಬೇಡಿಕೆಯಾಗಿದೆ.