ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 2024-25 ನೇ ಸಾಲಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 6, 2024 ರವರೆಗೆ ವಿಸ್ತರಿಸಲಾಗಿದೆ.

Written by - Manjunath N | Last Updated : Jan 3, 2024, 11:55 PM IST
  • ಮಗುವಿನ ಇತ್ತೀಚಿನ ಭಾವಚಿತ್ರ, ಮಗುವಿನ ಎಸ್‍ಎಟಿಎಸ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು
  • ಮೀಸಲಾತಿ ಕೋರುವ ಪ್ರಮಾಣ ಪತ್ರಗಳು, ಪಡಿತರ ಚೀಟಿಯ ಝರಾಕ್ಸ್ ಪತ್ರಿಯೊಂದಿಗೆ ಅರ್ಜಿ ಸಲ್ಲಿಸಬಹುದು
ವಿವಿಧ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ title=

ಧಾರವಾಡ : 2024-25 ನೇ ಸಾಲಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 6, 2024 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮಲ ಹೊರುವ ಪದ್ಧತಿ.! 

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆ: ಮಗುವಿನ ಇತ್ತೀಚಿನ ಭಾವಚಿತ್ರ, ಮಗುವಿನ ಎಸ್‍ಎಟಿಎಸ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು ಹಾಗೂ ಪ.ಜಾತಿ ಪ.ಪಂಗಡ ಹೊರತುಪಡಿಸಿ ಉಳಿದ ವರ್ಗದವರು ಸಲ್ಲಿಸುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಪ್ರಸ್ತುತ ವರ್ಷದ್ದಿರಬೇಕು. ಮಗುವಿನ ಆಧಾರ ಕಾರ್ಡ ಝರಾಕ್ಸ್, ವಿಶೇಷ ಮೀಸಲಾತಿ ಕೋರುವ ಪ್ರಮಾಣ ಪತ್ರಗಳು, ಪಡಿತರ ಚೀಟಿಯ ಝರಾಕ್ಸ್ ಪತ್ರಿಯೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0836-2447201 ಹಾಗೂ http:/kea.kar.nic.in http://kreis.kar.nic.in ಜಾಲತಾಣವನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕ ಅಲ್ಲಾಬಕಾಷ ಎಂ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News