ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಸೋಲಾರ್ ಹಗರಣ ಆಗಿದೆ ಎಂಬ ಆರೋಪ ಸಂಬಂಧ ಈ ಬಗ್ಗೆ ತನಿಖೆ ಆಗಬೇಕು ಎಂಬ ಒತ್ತಾಯ ಕುರಿತು ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಕಾದು ನೋಡಿ ಎಂದರು. ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯ ಹೊರಬರಲಿ ಎಂದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಶಾಸಕ ಎನ್. ಮಹೇಶ್ ಕಮಾಲ್...7 ಅನರ್ಹರಲ್ಲಿ 6 ಮಂದಿ ಜಯಭೇರಿ!!


67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ಧಿಗೋಷ್ಠಿ ನಡೆಸಿದರು. ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವದ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು. 


ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : 


ನಾಳೆ ಸಂಜೆ 4.00 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ  ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಕೋರಿದರು. 


ರಾಜ್ಯೋತ್ಸವ ಪ್ರಶಸ್ತಿ:


ನಾಳೆ ಸಂಜೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಳ ವಿತರಣೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು . ಕಾರ್ಯಕ್ರಮ ದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ತಿಳಿಸಿದರು.


ಬಂಡವಾಳ ಹೂಡಿಕೆದಾರರ ಸಮಾವೇಶ :


ನವೆಂಬರ್ 2, 3 4 ರಂದು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಗತ್ತಿನಾದ್ಯಂತ  ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಜೊತೆಗೆ 5 ಲಕ್ಷ ಕೋಟಿ ರೂ.ಗಳಿಗೂ ಹೆಚ್ವಿನ ಬಂಡವಾಳ ಹೂಡಿಕೆಯಾಗುತ್ತದೆ. ಈಗಾಗಲೇ ಬಹಳಷ್ಟು ಜನ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದು,  ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾಗಿದೆ.  ಭರವಸೆ ಪತ್ರವನ್ನೂ ನಾಳೆ ವಿತರಿಸಲಿದ್ದು, ಮುಂದಿನ 3 ದಿನಗಳ ಕಾಲ ಹಲವಾರು ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ  ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ ಕ್ಷೇತ್ರ ಮುಂತಾದ ಪ್ರಮುಖ   ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆಯ ಬಗ್ಗೆ  ಚರ್ಚಾ ಗೋಷ್ಠಿಗಳು  ನಡೆಯಲಿವೆ. ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಈ ಕಾರ್ಯಕ್ರಮ  ರಾಜ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ. ಇದರಲ್ಲಿಯೂ ಆಸಕ್ತರು, ಉದ್ಯಮಿಗಳು ಹಾಗೂ ಸಣ್ಣ ಕೈಗಾರಿಕೋದ್ಯಮಿಗಳಿಗೆ ಅವಕಾಶವಿದೆ. ಹೆಸರುಗಳನ್ನು ನೋಂದಾಯಿಸಿಕೊಂಡು ಭಾಗವಹಿಸಬೇಕು. ನೋಂದಣಿ ಮೂಲಕ ಮಾತ್ರವೇ ಸಮಾವೇಶಕ್ಕೆ ಪ್ರವೇಶವಿದೆ ಎಂದರು. 


ಇದನ್ನೂ ಓದಿ : ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ’ ಎಂದ ಎಚ್ಡಿಕೆ


ನವೆಂಬರ್ 11 ರಂದು ಪ್ರಧಾನಿಗಳಿಂದ ಪ್ರಗತಿ  ಪ್ರತಿಮೆ ಉದ್ಘಾಟನೆ : 


ನವೆಂಬರ್ 11ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್,   ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ - ಚೆನ್ನೈ, ಬೆಂಗಳೂರು- ಮೈಸೂರಿಗೆ , ಹೈಸ್ಪೀಡ್ ರೈಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. 


ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕೂಡ ಪ್ರಧಾನಿಗಳೇ  ಉದ್ಘಾಟಿಸುತ್ತಿದ್ದು, ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಯ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ.  ಲಕ್ಷಾಂತರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ವಿವರಿಸಿದರು. ಇನ್ಸ್ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ಡಿಜಿಪಿ ಅವರಿಗೆ ಸೂಚನೆ ನೀಡಲಾಗಿದೆ. ಸಂಪೂರ್ಣ, ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.