ಭೂಮಿ ಕಬಳಿಸಲು ವಕ್ಫ್ ಗೆ ಸುಪ್ರೀಂ ಪವರ್ ಕೊಟ್ಟಿದ್ದೇ ಸೋನಿಯಾ, ಮನಮೋಹನ್ ಸಿಂಗ್-ಪ್ರಹ್ಲಾದ್ ಜೋಶಿ
ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ರೈತರನ್ನು, ಮಠ ಮಾನ್ಯಗಳನ್ನು ಮತ್ತು ಬಡ ಜನಸಾಮಾನ್ಯರನ್ನು ಹಿಂಸಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು
ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಫ್ ಬೋರ್ಡ್ "ಲ್ಯಾಂಡ್ ಜಿಹಾದ್" ನಡೆಸುತ್ತಿದ್ದು, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕೂ ಇದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಇಂದು ANI ಜತೆ ಮಾತನಾಡಿದ ಸಚಿವರು, ಮುಸ್ಲಿಂ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಟ್ಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್
ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಕೈಗೊಳ್ಳುವ ಮೂಲಕ ರಾಜ್ಯದಲ್ಲಿ ರೈತರನ್ನು, ಮಠ ಮಾನ್ಯಗಳನ್ನು ಮತ್ತು ಬಡ ಜನಸಾಮಾನ್ಯರನ್ನು ಹಿಂಸಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇಸ್ಲಾಂ ಮೂಲಭೂತವಾದಿಗಳ ಬೆಂಬಲಕ್ಕೆ ನಿಂತಿದೆ. ಹೀಗಾಗಿಯೇ ವಕ್ಫ್ ಬೋರ್ಡ್ ಎಲ್ಲಿ ಬೇಕಲ್ಲಿ ರೈತರ ಜಮೀನು ಕಬಳಿಸುತ್ತಿದೆ. 40-50 ವರ್ಷಗಳಿಂದ ಉಳುಮೆ ಮಾಡುತ್ತಿರುವ ಜಮೀನು ನಮಾಜ್ ಮಾಡುತ್ತಿದ್ದ ಸ್ಥಳವೆಂದು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದೆ. ಇದಕ್ಕೆಲ್ಲ ಅಧಿಕಾರ ಕೊಟ್ಟವರೇ ಕಾಂಗ್ರೆಸ್ಸಿಗರು ಎಂದು ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರ ಡಿಸಿ ಮೂರ್ಖತನ: ತಲತಲಾಂತರಿಂದ ಇರುವ ರೈತರ ಜಮೀನು, ಮಠದ ಆಸ್ತಿಯನ್ನು ವಕ್ಫ್ ಆಸ್ತಿಯಾಗಿ ಪರಿವರ್ತಿಸುವಲ್ಲಿ ವಿಜಯಪುರ ಜಿಲ್ಲಾಧಿಕಾರಿ ಮೂರ್ಖತನ ತೋರಿದ್ದಾರೆ. ಈಗ ಸರಿಪಡಿಸಲು ದಾಖಲೆ ಕೊಡಿ ಎನ್ನುತ್ತಿದ್ದಾರೆ. ರೈತರೇಕೆ ದಾಖಲೆ ಕೊಡಬೇಕು? ಲೋಪ ಮಾಡಿರುವುದು ನೀವು. ನೀವೇ ಸರಿಪಡಿಸಿ ಎಂದು ಸಚಿವ ಪ್ರಲ್ಹಾದ ಜೋಶಿ ಹರಿ ಹಾಯ್ದರು.
ಇದನ್ನೂ ಓದಿ : ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ನೀಡಿದ್ದರೆ ವಾಪಸ್ ಪಡೆಯಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ
ಇದರಲ್ಲಿ ಜಿಲ್ಲಾಧಿಕಾರಿ ಪಾತ್ರಕ್ಕಿಂತ ಸಿಎಂ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಸೇರಿದಂತೆ ಪ್ರಮುಖ ಸಚಿವರದ್ದೇ ಪಾತ್ರವಿದೆ. ಹಾಗಾಗಿ ತಹಶೀಲ್ದಾರ್ ಮತ್ತು ಅಧಿಕಾರಿಗಳು ರೈತರ ಪಹಣಿ ತಿದ್ದುಪಡಿ ಮಾಡಿದ್ದಾರೆ ಎಂದರು.
ತಹಶೀಲ್ದಾರ್ ತಮ್ಮ ಮನೆ ನೀಡಲಿ ನೋಡೋಣ: ವಕ್ಫ್ ಗೆ ರೈತರ ಜಮೀನು ನೀಡಿದ ತಹಶೀಲ್ದಾರ್ ಮತ್ತು ಅಧಿಕಾರಿಗಳು ವಕ್ಫ್ ಗೆ ತಮ್ಮ ಮನೆ, ಜಮೀನನ್ನು ಹೀಗೆ ಪರಿವರ್ತಿಸಿ ಕೊಡಲಿ ನೋಡೋಣ!? ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಸುಪ್ರೀಂ ಪವರ್ ಕೊಟ್ಟ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್: ದೇಶಾದ್ಯಂತ ಮುಸ್ಲಿಂ ಸಮುದಾಯವನ್ನು ತಮ್ಮ ಪಕ್ಷದ ಮತ ಬ್ಯಾಂಕ್ ಆಗಿ ಹಿಡಿದಿಟ್ಟುಕೊಳ್ಳಲೆಂದು 2013ರಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ವಕ್ಫ್ ಬೋರ್ಡ್ ಗೆ ಸುಪ್ರೀಂ ಪವರ್ ಕೊಟ್ಟಿದ್ದಾರೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.
ಒಳ ಮೀಸಲಾತಿ; ಸುಪ್ರೀಂ ಆದೇಶ ಪಾಲನೆ:
ಒಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸುಪ್ರೀಂ ಕೋರ್ಟ್ ಆದೇಶವನ್ನು ಅನುಸರಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.