ರಾಜ್ಯ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ
ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕನ್ನಡಿಗರಿಗೆ ಅದರಲ್ಲೂ ರಾಜ್ಯದ ಮಹಿಳೆಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಮಾಡಿದರು.
ತದನಂತರ ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಜೊತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಾನು ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಅಲ್ಕಾ ಲಂಬಾ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.
ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕನ್ನಡಿಗರಿಗೆ ಅದರಲ್ಲೂ ರಾಜ್ಯದ ಮಹಿಳೆಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಸೂಚನೆ
ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ, ಗಂಡನ ಶಸ್ತ್ರ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಕೆಲವು ಮಹಿಳೆಯರು ತಮ್ಮ ಮನೆಗೆ ಫ್ರಿಡ್ಜ್, ಟಿವಿ ಹಾಗೂ ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ.
ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1984ರಲ್ಲಿ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿದರು. 40 ವರ್ಷಗಳ ನಂತರ ಈ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.