ಧಾರವಾಡ:  ಜಿಲ್ಲೆಗೆ ಅಮಿತ್ ಶಾ ಅವರು ಆಗಮಿಸುತ್ತಿದ್ದಾರೆ. ಬಿವ್ಹಿಬಿ ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಬಹುನೀರಿಕ್ಷಿತ ಎನ್.ಎಫ್‌.ಎಸ್.ಯು(ನ್ಯಾಶನಲ್ ಫಾರೆನ್ಸಿಕ್ ಸೈನ್ಸ್ ಯುನಿವರ್ಸಿಟಿ) ಅಡಿಗಲ್ಲು ಸಮಾರಂಭ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Old Pension Scheme : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಸುಪ್ರೀಂ ಅಸ್ತು!


ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,  ಎನ್.ಎಫ್.ಎಸ್.ಯು ಬಗ್ಗೆ ಈಗಾಗಲೇ ಬೇಡಿಕೆ ಇಟ್ಟಿದ್ದೇವು. ಈಗ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಧಾರವಾಡಕ್ಕೆ ಎನ್.ಎಫ್.ಎಸ್.ಯು ಜಾರಿಯಾಗಿರುವುದು ನಿಜಕ್ಕೂ ವಿಶೇಷವಾಗಿದೆ. ಈ ಭಾಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಂತೆ ಎನ್.ಎಫ್.ಎಸ್.ಯು ಕೂಡ ಕಾರ್ಯಾರಂಭವಾಗಲಿದ್ದು, ದಕ್ಷಿಣ ಭಾರತದಲ್ಲಿಯೇ ಮೊದಲ ವಿಶ್ವವಿದ್ಯಾಲಯ ಇದಾಗಿದೆ ಎಂದರು.


ಇದನ್ನೂ ಓದಿ : Driving Licence : ಈಗ ಕಾರು, ಬೈಕ್, ಸ್ಕೂಟರ್ ಓಡಿಸಲು ಅಗತ್ಯವಿಲ್ಲ ಡಿಎಲ್ : ಅದಕ್ಕೆ ಈ ಕೆಲಸ ಮಾಡಿ!


ಇನ್ನೂ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿರುವ ಭಯವನ್ನು ದೂರಮಾಡಿ ಹೊಸ ಉತ್ಸಾಹವನ್ನು ಸೃಷ್ಟಿಸುವ ಸದುದ್ದೇಶದಿಂದ ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ ಕೋಟ್ಯಾಂತರ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.