Big Breaking: ಶಾಸಕ ಸ್ಥಾನದಿಂದ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ಆರ್‌.ಶಂಕರ್‌ ಅನರ್ಹಗೊಳಿಸಿ ಸ್ಪೀಕರ್ ತೀರ್ಪು

ಆರ್.ಶಂಕರ್ ಅವರನ್ನು 3 ವರ್ಷ 10 ತಿಂಗಳ ಕಾಲ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಗುರುವಾರ ಸ್ಪೀಕರ್ ತೀರ್ಪು ನೀಡಿದ್ದಾರೆ.

Last Updated : Jul 25, 2019, 09:14 PM IST
Big Breaking: ಶಾಸಕ ಸ್ಥಾನದಿಂದ ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ಆರ್‌.ಶಂಕರ್‌ ಅನರ್ಹಗೊಳಿಸಿ ಸ್ಪೀಕರ್ ತೀರ್ಪು title=
file photo : ANI

ಬೆಂಗಳೂರು: ಶಾಸಕರಾದ ಆರ್.ಶಂಕರ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ತೀರ್ಪು ನೀಡಿದ್ದಾರೆ.

ಬೆಂಗಳೂರಿನ ಶಕ್ತಿಸೌಧ ವಿಧಾಸೌಧದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್ ಆರ್.ರಮೇಶ್ ಕುಮಾರ್ ಅವರು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ರಾ ಕುಮಟಳ್ಳಿ, ರಾಣಿಬೆನ್ನೂರು ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ, ಪಕ್ಈಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಈ ಶಾಸಕರು 2013ರವರೆಗೆ ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

 

ಕೆಪಿಜೆಪಿ ಪಕ್ಷದಿಂದ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಆರ್. ಶಂಕರ್ ಅವರು ರಾಜ್ಯಪಾಲರಿಗೆ ರಾಜಿನಾಮೆ ಪತ್ರ ನೀಡಿ, ಬಿಜೆಪಿಗೆ ಬೆಂಬಲ ನೀಡುವುದಾಗಿ ಈ ಹಿಂದೆ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಆರ್ ಶಂಕರ್ ಅವರು ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ವಿಲೀನವಾಗಿತ್ತು. ಹೀಗಾಗಿ ಆರ್.ಶಂಕರ್ ಅವರಿಗೆ ಸದನದಲ್ಲಿ ಕಾಂಗ್ರೆಸ್ ಸಾಲಿನಲ್ಲಿ ಸ್ಥಾನ ನೀಡಲಾಗಿತ್ತು. ಆದರೀಗ ಬಿಜೆಪಿಗೆ ಬೆಂಬಲ ನೀಡುವುದು ನಿಯಮಕ್ಕೆ ವಿರುದ್ದ, ಹಾಗಾಗಿ ಅವರನ್ನು  10ನೇ ಶೆಡ್ಯೂಲ್ ನಡಿ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಅರ್ಜಿ ಸಲ್ಲಿಸಿದ್ದರು. 
 
ಈ ಅರ್ಜಿಯ ವಿಚಾರಣೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಇಂದಿನಿಂದಲೇ ಜಾರಿಗೆ ಬರುವಂತೆ ಆರ್.ಶಂಕರ್, ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ ಅವರನ್ನು 2023ರವರೆಗೆ ಅಂದರೆ, 3 ವರ್ಷ 10 ತಿಂಗಳ ಕಾಲ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಗುರುವಾರ ತೀರ್ಪು ನೀಡಿದ್ದಾರೆ.

Trending News