ಬೆಂಗಳೂರು: ನೆಲಮಂಗಲ ತಾಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯು (ಕೆಐಎಡಿಬಿ) ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವ ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ


ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಿಯಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು ಮತ್ತು ಕಟ್ಟಡಗಳಿಗೆ ಮಾತ್ರ ಪರಿಹಾರ ಕೊಡಲಾಗುವುದು. ಆದರೆ ಕೆಲವೆಡೆಗಳಲ್ಲಿ ವಿಪರೀತ ಪರಿಹಾರ ದಕ್ಕಿಸಿಕೊಳ್ಳಲೆಂದೇ ಕೆಲವರು ಅಧಿಸೂಚಿತ ಜಮೀನುಗಳಲ್ಲಿ ಬೇರೆಡೆ ಬೆಳೆದು ನಿಂತಿರುವ ಬಲಿತ ಗಿಡಮರಗಳನ್ನು ತಂದು ನೆಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕಾರಣಕ್ಕೆ ಈ ಆದೇಶ ಮಾಡಿದ್ದು, ತನಿಖಾ ತಂಡದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್ ಕೂಡ ಇರಲಿದ್ದಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: 6,000 ಅಡಿಗಳಿಂದ  ಭೀಕರವಾಗಿ ಕುಸಿದ ಸಿಂಗಾಪುರ್ ಏರ್‌ಲೈನ್ಸ್ ವಿಮಾನ ಓರ್ವ ಸಾವು, ಹಲವರಿಗೆ ಗಾಯ


ಕರ್ನಾಟಕ ರಾಜ್ಯ ದೂರ ಸಂವೇಧಿ ಅನ್ವಯಿಕ ಕೇಂದ್ರ ಅಥವಾ ಇಸ್ರೋದ ಸ್ಯಾಟಲೈಟ್ ಮ್ಯಾಪಿಂಗ್ ಆಧರಿಸಿಯೇ ಅಧಿಸೂಚಿತ ಜಮೀನುಗಳಿಗೆ ಪರಿಹಾರ ವಿತರಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಅಧಿಸೂಚನೆ ಹೊರಡಿಸಿದ ನಂತರ ಹೆಚ್ವಿನ ಪರಿಹಾರಕ್ಕಾಗಿ ಗಿಡ, ಮರ ತಂದು ನೆಡುವುದರ ಮೂಲಕ ಸಂಸ್ಥೆಗೆ ನಷ್ಟ ಉಂಟು ಮಾಡಿದರೆ ಅದಕ್ಕೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಹಾಗೆಯೇ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಹೇಶ ಎಚ್ಚರಿಸಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.