ಬೆಂಗಳೂರು: ಶಿಕ್ಷಣ ಇಲಾಖೆ ಆಕಾಶವಾಣಿ ಮೂಲಕ ನಾಳೆಯಿಂದ ಕಲಿಯುತ್ತಾ ನಲಿಯೋಣ ಎನ್ನುವ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ನಾಳೆಯಿಂದ ಅಂದರೆ ಜನವರಿ 11ರಿಂದ ಏಪ್ರಿಲ್ 5 ರವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ.
ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು,ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಈ ಪ್ರಯತ್ನ.
ಇದನ್ನೂ ಓದಿ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವ ಅವರ ಬಹಿರಂಗ ಪತ್ರ
ಈ ಕಾರ್ಯಕ್ರಮಗಳ ಮೂಲಕ ನಲಿ - ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ...ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸುವ ಪ್ರಯತ್ನವಿದು.ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಶಿಕ್ಷಣ ಸಚಿವರಾದ ಎಸ್ ಸುರೇಶ ಕುಮಾರ (S Suresh Kumar) ಮನವಿ ಮಾಡಿದ್ದಾರೆ.
ಮತ್ತು ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ. ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ whatsapp ನಂಬರ್ 9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು.
ಇದನ್ನೂ ಓದಿ: 7 ನೇ ತರಗತಿ ವಿದ್ಯಾರ್ಥಿಗಳಿಗೆ 'ಪಬ್ಲಿಕ್ ಪರೀಕ್ಷೆ'; ಶಿಕ್ಷಣ ಸಚಿವರು ಹೇಳಿದ್ದೇನು?
ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ. ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿದೆ. ಜೊತೆಗೆ ಈ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನೂ ವಾಟ್ಸಪ್ ಮೂಲಕ ತಿಳಿಸಲು ಅವಕಾಶವಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.