ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಸ್ಥಾನಮಾನ: ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಸ್ಥಾನಮಾನ: ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಹಾಗೂ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಹೇಳಿದರು.
ಇದನ್ನೂ ಓದಿ: ರಾಜಕಾಲುವೆ, ಕೆರೆ ದುರಸ್ತಿಗೆ ಕೇಂದ್ರದ ಬಳಿ ಅನುದಾನಕ್ಕೆ ಪ್ರಸ್ತಾವನೆ
ಗುರುವಾರದಂದು ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಸ್ತ್ರ ಚಿಕಿತ್ಸೆ ಸಂಕೀರ್ಣ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಕಿಮೋಥೆರಪಿ ವಿಭಾಗಗಳಿಗೆ ಭೇಟಿ ಹಾಗೂ ಪರಿಶೀಲನೆ ನಡೆಸಿ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿ ಮಾಧ್ಯಮದವರ ಜೊತೆ ಮಾತನಾಡಿದರು.
ವಿಮ್ಸ್ ಬಹಳ ಹಳೆಯ ಕಾಲೇಜು ಸಂಸ್ಥೆಯಾಗಿದ್ದು, ಇದರ ಅಭಿವೃದ್ಧಿಗೆ ಸರ್ಕಾರದಿಂದ ವರ್ಷವಾರು ಅನುದಾನ ಒದಗಿಸಲಾಗುತ್ತಿದೆ. ಅನುದಾನದಲ್ಲಿ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಜಯನಗರ ಜಿಲ್ಲೆಯಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದರು.
ಇದನ್ನೂ ಓದಿ: ಬಿಜೆಪಿ ಈಗ ಯಾರಿಗೂ ಬೇಡದ ಅನಾಥ ಶಿಶುವಾಗಿದೆ!: ಕಾಂಗ್ರೆಸ್ ವ್ಯಂಗ್ಯ
ವಿಮ್ಸ್‍ನಲ್ಲಿ ಇತ್ತೀಚಿನ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ, ರೋಸ್ಟರ್ ಮೆರಿಟ್ ಹಾಗೂ ಪದೋನ್ನತಿ ಆಧಾರದ ಮೇಲೆ ನೇಮಕಕ್ಕೆ ಸರ್ಕಾರ ಮಟ್ಟದ ಚರ್ಚೆಯ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಚಿವರು, ಸಂಸ್ಥೆಯ ಆವರಣದಲ್ಲಿನ ಸಾರ್ವಜನಿಕರ ಬಳಿ ಆಸ್ಪತ್ರೆಯಲ್ಲಿ ಲಭಿಸುವ ಚಿಕಿತ್ಸೆ ಕುರಿತು ಮಾಹಿತಿ ಪಡೆದರು. ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುಶಲೋಪರಿ ವಿಚಾರಿಸಿದರು.
ನಂತರ, ಕೆಎಂಇಆರ್‍ಸಿ ಅನುದಾನದಲ್ಲಿ ರೂ.3828(ಲಕ್ಷಗಳಲ್ಲಿ) ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಧ್ಯಾಪಕರ ಸಭಾಂಗಣ, 300 ವಿದ್ಯಾರ್ಥಿಗಳ ಸಾಮಥ್ರ್ಯವುಳ್ಳ ಪರೀಕ್ಷಾ ಕೊಠಡಿಗಳ ಕಾಮಗಾರಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ; ಸಾಲಕ್ಕೆ ಹೆದರಿ ರೈತ ಸಾವು!
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿದಂತೆ ವಿಮ್ಸ್ ಆಡಳಿತಾಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರು ಹಾಗೂ ಇತರರು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.