Special Train for Karnataka: ರಾಜ್ಯದಲ್ಲಿ ಮತ್ತೊಂದು ವಿಶೇಷ ರೈಲು ಸಂಚಾರ ನಡೆಸಲಿದೆ. ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. ಚೆನ್ನೈ ಮತ್ತು ಸತ್ಯಸಾಯಿ ಪ್ರಶಾಂತಿ ನಿಲಯಂ ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 12691/2 ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಚೆನ್ನೈ ಮತ್ತು ಶಿವಮೊಗ್ಗ ನಡುವೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.


ಇದನ್ನೂ ಓದಿ: Daily GK Quiz: ಮೌರ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು ಯಾರು?


ಈ ಮೂಲಕ ತುಮಕೂರು ಭಾಗದ ಜನರಿಗೆ ಚೆನ್ನೈಗೆ ನೇರ ಪ್ರಯಾಣ ಬೆಳೆಸುವ ಅವಕಾಶ ದೊರೆತಂತಾಗಿದೆ. ಈ ರೈಲನ್ನು ತುಮಕೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿಯಲ್ಲಿ ನಿಲುಗಡೆ ಮಾಡಲಾಗುವುದು. 


ಚೆನ್ನೈನಿಂದ ಪ್ರತಿ ಶುಕ್ರವಾರ ರಾತ್ರಿ 11.30ಕ್ಕೆ ನಿರ್ಗಮಿಸುವ ಈ ರೈಲು ಶನಿವಾರ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ ಪ್ರತಿ ಶನಿವಾರ ಸಂಜೆ 4 ಗಂಟೆಗೆ ಹೊರಡುವ ರೈಲು ಬೆಳಗಿನ ಜಾವ 4.55ಕ್ಕೆ ಚೆನ್ನೈ ತಲುಪಲಿದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.


ಇದನ್ನೂ ಓದಿ: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ..! ಮಕ್ಕಳಿಗೆ ತಿಮ್ಮಪ್ಪನ ದರ್ಶನ ಉಚಿತ.. ವಯಸ್ಸು ಇಷ್ಟಾಗಿರಬೇಕು..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.