ಆಡಳಿತದಲ್ಲಿ ಕನ್ನಡ ಜಾರಿಗೊಳಿಸುವ ಪ್ರಯತ್ನಕ್ಕೆ ವೇಗ: ಶಿವರಾಜ್ ತಂಗಡಗಿ
ರಾಜ್ಯದಲ್ಲಿ ಆಡಳಿತದಲ್ಲಿ ಕನ್ನಡ ಜಾರಿಗೊಳಿಸುವ ಪ್ರಯತ್ನಕ್ಕೆ ವೇಗ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಶಿವರಾಜ್ ತಂಗಡಗಿ ಹೇಳಿದರು.
ಬೆಂಗಳೂರು : ರಾಜ್ಯದಲ್ಲಿ ಆಡಳಿತದಲ್ಲಿ ಕನ್ನಡ ಜಾರಿಗೊಳಿಸುವ ಪ್ರಯತ್ನಕ್ಕೆ ವೇಗ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಶಿವರಾಜ್ ತಂಗಡಗಿ ಹೇಳಿದರು.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ಬೇಕು. ಅಧಿಕಾರಿಗಳ ಜೊತೆಗೆ ಸಭೆ ಮಾಡಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ಇದೇ ಸಂದರ್ಭದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ನಾಲ್ಕು ವಿಭಾಗದ ಸಭೆ ನಡೆಸಿ, ಸಾಹಿತಿಗಳ ಜೊತೆಗೆ ಚರ್ಚೆ ನಡೆಸಲಾಗುವುದು. ಬುಧವಾರ ವಿಧಾನಸೌಧ ದಲ್ಲಿ ನಡೆದ ಸಭೆಯಲ್ಲಿ 180ಕ್ಕೂ ಹೆಚ್ಚು ಸಾಹಿತಿಗಳು ಬಂದಿದ್ದರು. ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ವಿವರಿಸಿದರು.
ಒಂದು ವರ್ಷದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ.ಕರ್ನಾಟಕದ ನಾಲ್ಕು ದಿಕ್ಕುಗಳಿಂದ ಜ್ಯೋತಿ,ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ಸೇರಿದಂತೆ ಹಲವು ಸಲಹೆಯನ್ನು ನೀಡಿದ್ದಾರೆ.
ನಾಲ್ಕು ವಿಭಾಗದ ಸಲಹೆ ಪಡೆದುಕೊಂಡು ರೂಪುರೇಷೆ ಮಾಡಲಾಗುವುದು ಎಂದರು.
ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ನಿರ್ಮಾಣ
ಮೂರು ಕೋಟಿ ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಭುವನೇಶ್ವರಿ ತಾಯಿಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.