ಬೆಂಗಳೂರು: 10ನೇ ಆವೃತ್ತಿಯ ಬೆಂಗಳೂರು ಮ್ಯಾರಥಾನ್ ಇದೇ ವರ್ಷ ಅಕ್ಟೋಬರ್ 8ರ ಭಾನುವಾರ ನಡೆಯಲಿದೆ. ಈ ಮ್ಯಾರಥಾನ್​ನ ಲೋಗೋವನ್ನ ಗುರುವಾರ ಬಿಡುಗಡೆ ಮಾಡಲಾಯಿತು. ಮುಂದಿನ 3 ವರ್ಷಗಳಿಗೆ ಬೆಂಗಳೂರು ಮ್ಯಾರಥಾನ್ ಓಟದ ಶೀರ್ಷಿಕೆ ಪ್ರಾಯೋಜಕರಾಗಲು ಪ್ರತಿಷ್ಠಿತ ವಿಪ್ರೋ ಲಿಮಿಟೆಡ್ ಸಂಸ್ಥೆಯು ಎನ್‌ಇಬಿ ಸ್ಪೋರ್ಟ್ಸ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. 


COMMERCIAL BREAK
SCROLL TO CONTINUE READING

ಕಂಠೀರವ ಕ್ರೀಡಾಂಗಣದಲ್ಲಿ ಈ ಮ್ಯಾರಥಾನ್ ಆರಂಭವಾಗಿ, ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಮತ್ತೆ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಅತ್ಯಂತ ಜನಪ್ರಿಯತೆ ಪಡೆದಿರುವ ‘ಸಿಟಿ ರನ್’ನಲ್ಲಿ ವಿವಿಧ ವಯೋಮಾನದ 20 ಸಾವಿರಕ್ಕೂ ಹೆಚು ಓಟಗಾರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮ್ಯಾರಥಾನ್ ಮೂರು ವಿಭಾಗಗಳಲ್ಲಿ ನಡೆಯಲಿದೆ. 42.195 ಕಿ.ಮೀ. ಪೂರ್ಣ ಮ್ಯಾರಥಾನ್, 21.1 ಕಿ.ಮೀ. ಹಾಫ್ ಮ್ಯಾರಥಾನ್ ಹಾಗೂ 5 ಕಿ.ಮೀ. ಹೋಪ್ ರನ್. ಈ ಓಟವು ಅಂತಾರಾಷ್ಟ್ರೀಯ ಮ್ಯಾರಾಥಾನ್‌ಗಳ ಸಂಸ್ಥೆ (ಎಐಎಂಎಸ್)ಯಿಂದ ಮಾನ್ಯತೆ ಪಡೆದಿದೆ.


ಇದನ್ನೂ ಓದಿ: ಭವಿಷ್ಯದ ಟೀಮ್ ಇಂಡಿಯಾದ ಬಗ್ಗೆ ಭಜ್ಜಿ ಹೇಳಿದ್ದೇನು ಗೊತ್ತೇ?


ಪ್ರಧಾನ ಸ್ಪರ್ಧೆಗೆ ಓಟಗಾರರನ್ನು ತಯಾರಾಗಿಸಲು ಎನ್‌ಇಬಿ ಸ್ಪೋರ್ಟ್ಸ್ ನಗರದಾದ್ಯಂತ ಹಲವು ಚಟುವಟಿಕೆಗಳನ್ನು ಆಯೋಜಿಸಲಿದೆ.  ಸ್ಪರ್ಧಿಗಳಲ್ಲಿ ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಪ್ರಧಾನ ಸ್ಪರ್ಧೆಯ ಸಿದ್ಧತೆಗಾಗಿ 3 ಅಭ್ಯಾಸ ಓಟಗಳನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ವಿಕಲ ಚೇತನರು, ಅಂಧರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಮ್ಯಾರಥಾನ್‌ನ ಎನ್‌ಜಿಒ ಪಾಟ್ನರ್​ ಆದ ಸ್ನೇಹಾ ಕೇರ್ ಹೋಮ್‌ನಲ್ಲಿ ಮಕ್ಕಳಿಗಾಗಿ ಓಟವೊಂದನ್ನು ನಡೆಸಲಾಗುತ್ತದೆ.


ಈ ಕುರಿತಂತೆ ಬೆಂಗಳೂರು ಮ್ಯಾರಥಾನ್‌ನ ಪ್ರಚಾರ ರಾಯಭಾರಿ  ರೀತ್ ಅಬ್ರಾಹಾಂ,  ‘ಈ ಪ್ರತಿಷ್ಠಿತ ಕಾರ್ಯಕ್ರಮದೊಂದಿಗೆ ಕೈಜೋಡಿಸಿರುವುದಕ್ಕೆ ಬಹಳ ಹೆಮ್ಮೆ. ಈ ಓಟದಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳನ್ನು ಹುರಿದುಂಬಿಸಲು ಹೆಚ್ಚೆಚ್ಚು ಸಂಖ್ಯೆಯಲ್ಲಿ ನಾಗರಿಕರು ಆಗಮಿಸಲಿದ್ದಾರೆ ಎನ್ನುವ ವಿಶ್ವಾಸವಿದೆ. ಇದೊಂದು ಕ್ರೀಡಾಕೂಟ ಎನ್ನುವುದಕ್ಕಿಂತ ಸಮುದಾಯದ ಒಂದು ಕಾರ್ಯಕ್ರಮವಾಗಿ ಬದಲಾಗಬೇಕು’ ಎಂದರು.  


ಇದನ್ನೂ ಓದಿ: ರೋಹಿತ್ ಶರ್ಮಾ ನಿವೃತ್ತಿ ಬಳಿಕ Team Indiaದ ನಾಯಕತ್ವ ವಹಿಸಿಕೊಳ್ಳೋದು ಈ ಬೌಲರ್ ಕಂ ಬ್ಯಾಟ್ಸ್’ಮನ್!


ಹಾಗೆಯೇ ವಿಪ್ರೋ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಜತಿನ್ ದಲಾಳ್,‘ಬೆಂಗಳೂರು ಮ್ಯಾರಥಾನ್‌ನ ಶೀರ್ಷಿಕೆ ಪ್ರಾಯೋಜಕರಾಗಿರುವುದು ಬಹಳ ಖುಷಿ ನೀಡಿದೆ. ಕಳೆದ 17 ವರ್ಷಗಳಿಂದ ‘ಸ್ಪಿರಿಟ್ ಆಫ್ ವಿಪ್ರೋ’ ಹೆಸರಿನಲ್ಲಿ ನಮ್ಮ ಉದ್ಯೋಗಿಗಳಿಗೆ ಓಟವನ್ನು ಆಯೋಜಿಸುತ್ತಿದ್ದೇವೆ. ಸಮುದಾಯದಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಇದು ಮತ್ತೊಂದು ಮಹತ್ವದ ಹೆಜ್ಜೆ ಎಂದು  ಹೇಳಿದರು.


ಮ್ಯಾರಥಾನ್ ಸಾಗುವ ದಾರಿಯಲ್ಲಿ ಸಹಾಯ ಕೇಂದ್ರಗಳು, ನೀರು, ವೈದ್ಯಕೀಯ ವ್ಯವಸ್ಥೆ, ಆ್ಯಂಬುಲೆನ್ಸ್ ಇತ್ಯಾದಿ ಇರಲಿವೆ. ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ನಿಯಮಿತ ಪ್ಲಾಸ್ಟಿಕ್ ಹಾಗೂ ಪೇಪರ್ ಬಳಕೆಯಾಗಲಿದೆ. ಉಪಹಾರಗಳಿಗೆ ಪರಿಸರ ಸ್ನೇಹಿ ಕಪ್ ಹಾಗೂ ತಟ್ಟೆಗಳನ್ನು ಬಳಸಲು ತೀರ್ಮಾನಿಸಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.