ಬೆಂಗಳೂರು: ಇಂಧನ ಏರಿಕೆ ವಿಷಯದಲ್ಲಿ ಸುಳ್ಳಿನ ಸರಮಾಲೆ/ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್ ಪಕ್ಷದ ಕಪಟ ನಾಟಕವಾಗಿದೆ ಎಂದು ಬಿಜೆಪಿ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಪೆಟ್ರೋಲ್/ಡೀಸೆಲ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿರುವ ಮಾನ್ಯ ಸಚಿವರಾದ ಶ್ರೀ ಎಂ.ಬಿ.ಪಾಟೀಲರು ಜನರಿಗೆ ಗ್ಯಾರಂಟಿ ನೀಡಲು ಈ ರೀತಿಯಾದ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ; ಮುಂದುವರೆದು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್/ಡೀಸೆಲ್ ದರ ಕಡಿಮೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಅಂಡಮಾನ್ ದ್ವೀಪದಲ್ಲಿ ಪೆಟ್ರೋಲ್ ದರ ಅತ್ಯಂತ ಕಡಿಮೆ ಇದೆ ಹಾಗೂ ಆಂಧ್ರ ಮತ್ತು ತೆಲಂಗಾಣದಲ್ಲಿ ಅತ್ಯಂತ ಹೆಚ್ಚಾಗಿದೆ.ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಅಬಕಾರಿ ಸುಂಕ [Excise Duty] ರೂ.19.90/- (ಪ್ರತಿ ಲೀಟರ್ ಮೇಲೆ) ಆಗಿದೆ, ಅದೇ ಕಾಂಗ್ರೆಸ್ ಸರ್ಕಾರದ VAT 24.17/- (ಪ್ರತಿ ಲೀಟರ್) ಆಗಿದೆ. ಪೆಟ್ರೋಲ್ ಮೇಲೆ ರಾಜ್ಯ ಸರ್ಕಾರ ಹಾಕುವ VAT ಕೇಂದ್ರ ಸರ್ಕಾರದ ಎಕ್ಸೈಸ್ ಡ್ಯೂಟಿ ಕ್ಕಿಂತ ಹೆಚ್ಚಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.