ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು (Sri Fakir Dingaleshwar Swamiji) ಹಿರಿಯರು. ನಮ್ಮಿಂದ ಅಥವಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Prahlad Joshi) ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ನಮ್ಮಿಂದಾಗಿರುವಸ್ ತಪ್ಪನ್ನು ಸರಿಪಡಿಸಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀ ದಿಂಗಾಲೇಶ್ವರ ಸ್ವಾಮೀಜಿಯವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ (Ex-minister Murugesh Nirani), ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ. ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ ಶ್ರೀಗಳು ಅದನ್ನು ಕ್ಷಮಿಸಬೇಕು ಎಂದು ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ- ಕಾಂಗ್ರೆಸ್, ಯಾವಾಗೆಲ್ಲ ರಾಹುಲ್ ಗಾಂಧಿಲಾಂಚ್ ಮಾಡಿದ್ದಾರೋ ಆಗೆಲ್ಲ ನಮಗೆ ಹೆಚ್ಚಿನ ಬೆಂಬಲ ಸಿಕ್ಕಿದೆ- ಜೋಶಿ
ಇದೇ ಸಂದರ್ಭದಲ್ಲಿ ಹರಿಹರ ಪಂಚಮಸಾಲಿ ಪೀಠದ (Harihar Panchmasali Peeth) ಶ್ರೀಗಳ ಹೇಳಿಗೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಶ್ರೀಗಳ ಹೇಳಿಕೆಯನ್ನು ನಾವು ಗಮನಿಸಿದ್ದೇವೆ. ಇದೇ ಏಪ್ರಿಲ್ 14ರಂದು ಹರಿಹರ ಪೀಠಕ್ಕೆ ತೆರಳಲಿದ್ದು, ಶ್ರೀಗಳೊಂದಿಗೆ ಮಾತುಕತೆ ನಡೆಸುತ್ತೇವೆ. ಬಿಜೆಪಿ ಪಕ್ಷದಿಂದ ಪಂಚಮಸಾಲಿ ಸಮಾಜಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ಈ ಕುರಿತು ಶ್ರೀಗಳಲ್ಲಿರುವ ಗೊಂದಲಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ- ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ
ಇನ್ನು, ದಿಂಗಾಲೇಶ್ವರ ಶ್ರೀಗಳ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (MLA Basanagowda Patil Yatnal) ಹಗುರವಾಗಿ ಮಾತನಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ಅವರ ಹೇಳಿಕೆಯನ್ನು ನಾನು ಗಮನಿಸಿಲ್ಲ. ಯಾವುದೇ ಸ್ವಾಮೀಜಿಗಳ ಬಗ್ಗೆ ಯಾರೂ ಕೂಡ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದಷ್ಟೇ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.