ಬೆಳಗಾವಿ: 'ಸತತ 45 ವರ್ಷ ಮನೆ ಬಿಟ್ಟು ಹಿಂದುತ್ವ, ಜಾಗೃತಿ, ಸಮಾಜಕ್ಕಾಗಿ ನಾನು ಹಲವು ತ್ಯಾಗಗಳನ್ನು ಮಾಡಿದ್ದೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ನನಗೆ ನೀಡಬೇಕು' ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಗುರುವಾರ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್(Pramod Muthalik) ಸುದ್ದಿಗೋಷ್ಠಿ ನಡೆಸಿದರು. 'ನಾನೂ ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ' ಎಂದು ತಿಳಿಸಿದರು.


R.Ashok: 'ಎಲ್ಲರನ್ನು ತೃಪ್ತಿ ಪಡಿಸಲು ದೇವರಿಂದಲೂ ಸಾಧ್ಯವಿಲ್ಲ'


'ಮನೆ ಬಿಟ್ಟು ನಾನು ಹಲವಾರು ಸಮಾಜ ಜಾಗೃತಿ ಕಾರ್ಯಕ್ರಮಗಳು, ಸಂಘಟನೆಗಳಲ್ಲಿ ಭಾಗಿಯಾಗಿದ್ದೇನೆ. ಇದನ್ನು ಪರಿಗಣಿಸಿ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು. ಈ ಕುರಿತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ' ಎಂದರು.


MP Renukacharya: ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ರೇಣುಕಾಚಾರ್ಯಗೆ ಸಿಎಂ ಭರ್ಜರಿ ಗಿಫ್ಟ್..!


'ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಇದನ್ನು ಪರಿಗಣಿಸಿ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು. ಈ ಕುರಿತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ' ಎಂದರು.


B.Sriramulu: ಟ್ವಿಟ್ಟರ್‌ನಲ್ಲಿ ಸೌಮ್ಯ ರೆಡ್ಡಿ v/s ಶ್ರೀರಾಮುಲು ಜಟಾಪಟಿ..!


ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು 2020ರ ಸೆಪ್ಟೆಂಬರ್‌ನಲ್ಲಿ ಮೃತಪಟ್ಟಿದ್ದರು. ಈಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.


Siddaganga Swamiji: ಸಿದ್ಧಗಂಗಾಶ್ರೀಗಳ ಪುಣ್ಯಸ್ಮರಣೆ ದಿನ 'ದಾಸೋಹ ದಿನ'ವನ್ನಾಗಿ ಆಚರಣೆ: ಸಿಎಂ ಬಿಎಸ್ ವೈ


ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವಿದೆ. ಮತ್ತೊಂದು ಕಡೆ ಉಪ ಚುನಾವಣೆಗೆ ಟಿಕೆಟ್‌ಗಾಗಿ 70ಕ್ಕೂ ಅಧಿಕ ಜನರು ಅರ್ಜಿಗಳನ್ನು ಸಲ್ಲಿಸಿದ್ದಾರೆ.


Ration Card: ಖಾತೆ ಹಂಚಿಕೆ ಬೆನ್ನಲ್ಲೇ 'ಪಡಿತರ ಚೀಟಿ'ದಾರರಿಗೆ 'ಸಿಹಿ ಸುದ್ದಿ' ನೀಡಿದ ಉಮೇಶ್ ಕತ್ತಿ..!


ದಿ. ಸುರೇಶ್ ಅಂಗಡಿ ಅವರ ಪುತ್ರಿ, ಸಚಿವ ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್‌ ಅವರು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದು, ಯಾವ ನಾಯಕರು ಖಚಿತಪಡಿಸಿಲ್ಲ.


B.S.Yediyurappa: ಹಾಲಿ ಸಚಿವರ ಖಾತೆಗಳು ಅದಲು-ಬದಲು..!? ಇಲ್ಲಿದೆ ಕಂಪ್ಲೀಟ್ ಪಟ್ಟಿ


ಅಮೆರಿಕದಲ್ಲಿರುವ ಬೆಳಗಾವಿಯ ಮೂಡಲಗಿ ತಾಲೂಕಿನ ಸೂರ್ಯಕಾಂತ ಸಂತ್ರಿ ಅವರು ಎನ್‌ಆರ್‌ಐ ಕೋಟಾದಲ್ಲಿ ಟಿಕೆಟ್ ನೀಡಬೇಕು ಎಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಉಪ ಚುನಾವಣೆ ದಿನಾಂಕ ಇನ್ನು ಘೋಷಣೆಯಾಗಬೇಕಿದೆ.


ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು?


ಬಿಜೆಪಿ ಮತ್ತು ಕಾಂಗ್ರೆಸ್ ಉಪ ಚುನಾವಣೆಗೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನ ಕೈಗೊಂಡಿದೆ.


BSY Cabinet : ನೂತನ ಸಚಿವರಿಗೆ ಖಾತೆ ಹಂಚಿಕೆ, ಯಾರಿಗೆ ಯಾವ ಖಾತೆ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G 
Apple Link - https://apple.co/3hEw2hy 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.