ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದ ಶ್ರೀಶೈಲಪ್ಪ ಬಿದರೂರು
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಶುಕ್ರವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿದರೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಶುಕ್ರವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿದರೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಅವರಿಗೆ ಹೃದಯಾಘಾತವಾದಾಗ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಸಭೆಯಲ್ಲಿದ್ದರು ಎಂದು ತಿಳಿದು ಬಂದಿದೆ.ಕೂಡಲೇ ಮಾಜಿ ಶಾಸಕರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಬಿದರೂರು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಒಕ್ಕಲಿಗರು ಕೃಷಿಯ ಜತೆಗೆ ಉದ್ಯಮಿಗಳೂ ಆಗಬೇಕು : ಅಶ್ವತ್ಥ ನಾರಾಯಣ
ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭ ಹೈನುಗಾರರಿಗೇ ನೀಡಲಿ-ಸಿದ್ದರಾಮಯ್ಯ
ಶ್ರೀಶೈಲಪ್ಪ ಬಿದರೂರ್ ಅವರು ಎಪ್ರಿಲ್ 15, 1962 ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ಜನಿಸಿದರು.1994 ರಲ್ಲಿ ರೋಣ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಜನತಾದಳದಿಂದ ವಿಧಾನಸಭೆಗೆ ಪ್ರವೇಶಿಸಿದ್ದರು.ಇದಾದ ನಂತರ ಅವರು ಎರಡನೇ ಬಾರಿಗೆ 2008 ರಲ್ಲಿ ಗದಗದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.