ಕೇಂದ್ರ ಸರ್ಕಾರ ಕೆಲಸ ಹುಡುಕುತ್ತಿರುವವರಿಗೆ ಇದು ಒಂದು ಒಳ್ಳೆಯ ಸದಾವಕಾಶವಾಗಿದ್ದು, ಈ ನಿಮಿತ್ತ ಅರ್ಹ ಅಭ್ಯರ್ಥಿಗಳನ್ನು ಸಂಸ್ಥೆ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿದೆ. ಅರ್ಹರು ಈ ಕೂಡಲೇ ಹುದ್ದೆಯ ವಿದ್ಯಾರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿಧಾನ, ಆಯ್ಕೆ ವಿಧಾನ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ. ಹೆಚ್ಚಿನ ಮಾಹಿತಿಗೆ https://ssc.nic.in/ ಸಂಪರ್ಕಿಸಬಹುದು.


COMMERCIAL BREAK
SCROLL TO CONTINUE READING

ನೇಮಕಾತಿ ಪೂರ್ಣ ವಿವರ ನೇಮಕಾತಿ ಸಂಸ್ಥೆ- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)


ಹುದ್ದೆ ಹೆಸರು: ಸಬ್ ಇನ್ಸ್ ಪೆಕ್ಟರ್ 
ಖಾಲಿ ಹುದ್ದೆ: ಒಟ್ಟು 4187
ಪೋಸ್ಟಿಂಗ್: ಭಾರತ 
ಮಾಸಿಕ ವೇತನ: ರೂ.35,400 ಯಿಂದ 1,12,400 ರೂ. 
ಅರ್ಜಿ ಸಲ್ಲಿಕೆ ಆರಂಭ: ಮಾರ್ಚ್ 04 
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಮಾರ್ಚ್ 28 
ಶುಲ್ಕ ಪಾವತಿ ದಿನಾಂಕ: ಮಾರ್ಚ್ 29


ಖಾಲಿ ಹುದ್ದೆಗಳ ಮಾಹಿತಿ
ಪೊಲೀಸ್ ಸಬ್ ಇನ್ಸ್ಪೆಕ್ಟರ್- ಪುರುಷ: 125
ಪೊಲೀಸ್ ಸಬ್ ಇನ್ಸ್ಪೆಕ್ಟರ್- ಮಹಿಳೆ: 61 ‌
CAPF ಸಬ್ ಇನ್ಸ್ಪೆಕ್ಟರ್: 4001 
ಒಟ್ಟು ಖಾಲಿ ಹುದ್ದೆ: 4187 
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆ ಹೊರಡಿಸಿದೆ.


ಅಭ್ಯರ್ಥಿಗಳ ಆಯ್ಕೆ ವಿಧಾನ 
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಮೇ 9, 10, ಮತ್ತು 13 ರಂದು ನಡೆಯಲಿದೆ. ಇದರೊಂದಿಗೆ ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿದೆ.


ವಯೋಮಿತಿ ಮತ್ತು ಸಡಿಲಿಕೆ ಮಾಹಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 20 ಮತ್ತು ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು ಎಂದು ಅಧಿಸೂಚನೆ ತಿಳಿಸಿದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲುಡಿ (OBC) ಅಭ್ಯರ್ಥಿಗಳಿಗೆ 13 ವರ್ಷ ಹಾಗೂ ಪಿಡಬ್ಲುಡಿ (ಎಸ್‌ಸಿ, ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ ಎಂದು ಅಧಿಸೂಚನೆ ಹೇಳಿದೆ. 


ಅರ್ಜಿ ಶುಲ್ಕದ ವಿವರ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾದ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಮತ್ತು ಮಾಜಿ ಸೈನಿಕರಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಅಧಿಕೃತ ಅಧಿಸೂಚನೆ ತಿಳಿಸಿದರು.


ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://ssc.nic.in/ ವೆಬ್‌ಸೈಟ್‌ಗೆ ಭೇಟಿ ನೀಡಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಈ https://ssc.gov.in/login ಜಾಲತಾಣಕ್ಕೆ ಸಂಪರ್ಕಿಸಬೇಕು ಎಂದು ಎಸ್‌ಎಸ್‌ಸಿ ತಿಳಿಸಿದೆ.