ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಂದೂಡಲಾಗಿದ್ದು, ಇದೀಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ(2nd PUC Exam 2021) ನಡೆಸಲು ಸಿದ್ಧೆ ನಡೆಸಲಾಗುತ್ತಿದೆ. ಜುಲೈ ಕೊನೆ ವಾರ ಅಥವಾ ಆಗಸ್ಟ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆಳಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಪ್ರಶ್ನೆ ಪತ್ರಿಕೆ ಸಿದ್ಧತೆ, ಪರೀಕ್ಷಾ ಕೇಂದ್ರಗಳ ಸಿದ್ಧತೆ ಬಹುತೇಕ ಮುಕ್ತಾಯವಾಗಿದ್ದು, ಮೊದಲಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿದೆ.


ಇದನ್ನೂಓದಿ : Southwest Monsoon : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ನೈಋತ್ಯ ಮುಂಗಾರು ಮಳೆ..!


ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ(Corona Second Wave) ಹತೋಟಿಗೆ ಬಂದ ಕೂಡಲೇ 15-20 ದಿನಗಳ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ವರ್ಷದಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.


ಇದನ್ನೂಓದಿ : Murugesh Nirani : 'ರಾಜ್ಯದಲ್ಲಿ ಹದಿನೈದು ದಿನದೊಳಗಾಗಿ ಹೊಸ ಮರಳು ನೀತಿ ಜಾರಿ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.