ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇರುವ ಕಾರಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ವಿಚಾರದಲ್ಲಿ ಸರ್ಕಾರ ಗೊಂದಲಕ್ಕೆ ಸಿಲುಕಿಕೊಂಡಿದೆ.


COMMERCIAL BREAK
SCROLL TO CONTINUE READING

ಶಿಕ್ಷಣ ಇಲಾಖೆ(Education Department)ಯು ಈಗಾಗಲೇ ಮೇ 24 ರಿಂದ ಜೂನ್ 16 ರವರೆಗೆ ದ್ವಿತೀಯ ಪಿಯುಸಿ(PUC) ಪರೀಕ್ಷೆ ಮತ್ತು ಜೂನ್ ನಲ್ಲಿ ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಆದರೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪರೀಕ್ಷೆಗಳನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ. ಈ ಬಗ್ಗೆ ಮೇ ತಿಂಗಳ ಮೊದಲ ವಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ : Ration Card : ಆಹಾರ ಇಲಾಖೆಯಿಂದ 1.31 ಲಕ್ಷ ಪಡಿತರ ಚೀಟಿ ರದ್ದು..!?


 ಕಳೆದ 24 ಗಂಟೆಗಳಲ್ಲಿ 39,047 ಕೋವಿಡ್ ಪ್ರಕರಣ(COVID-19 Case)ಗಳು ದೃಢಪಟ್ಟಿವೆ. ಹೀಗಾಗಿ, ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿದೆ. ರಾಜ್ಯದಲ್ಲಿ ಈಗ 3,28,884 ಸಕ್ರಿಯ ಪ್ರಕರಣಗಳಿವೆ. 


ಇದನ್ನೂ ಓದಿ : ಕರ್ನಾಟಕದಲ್ಲಿ ಒಂದೇ ದಿನದಲ್ಲಿ 39,047 ಕೊರೊನಾ ಪ್ರಕರಣಗಳು ದಾಖಲು


ಕೋವಿಡ್ ಪ್ರಕರಣಗಳು ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 22.70%ಕ್ಕೆ ಏರಿದೆ. ಇದೇ ಅವಧಿಯಲ್ಲಿ 229 ಮಂದಿ ಕೋವಿಡ್‌ನಿಂದ(Covid-19) ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ : ಮೂಗಿಗೆ ನಿಂಬೆ ಹಣ್ಣಿನ ರಸ ಬಿಟ್ಟುಕೊಂಡ ಶಿಕ್ಷಕನ ಸಾವು


ಬೆಂಗಳೂರು(Bengaluru) ನಗರದಲ್ಲಿ ಒಂದೇ ದಿನ 22,596 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 137 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಹೀಗಾಗಿ, ಈವರೆಗೆ ನಗರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 6,139ಕ್ಕೆ ಏರಿದೆ. 2,24,152 ಸಕ್ರಿಯ ಪ್ರಕರಣಗಳಿವೆ.


ಇದನ್ನೂ ಓದಿ :  Umesh Katti : ಪಡಿತರ ಚೀಟಿ ಅಕ್ಕಿ ಕೇಳಿದ ರೈತನಿಗೆ 'ಸತ್ತು ಹೋಗು' ಎಂದ ಆಹಾರ ಸಚಿವ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.