ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಬಗ್ಗೆಯೂ ಹಲವು ಗೊಂದಲಗಳು ವಿದ್ಯಾರ್ಥಿಗಳು, ಪೋಷಕರಲ್ಲಿ ಮನೆ ಮಾಡಿತ್ತು. ಇದಕ್ಕೆ ತೆರೆ ಎಳೆದಿರುವ ರಾಜ್ಯ ಶಿಕ್ಷಣ ಇಲಾಖೆ ಜುಲೈ ಕೊನೆಯ ವಾರದಲ್ಲಿ SSLC ಪರೀಕ್ಷೆ ನಡೆಯೋದು ಬಹುತೇಕ ಫಿಕ್ಸ್​ ಎಂದು ತಿಳಿಸಲಾಗಿದೆ.


COMMERCIAL BREAK
SCROLL TO CONTINUE READING

 ಈ ಹಿನ್ನೆಲೆಯಲ್ಲಿ ಪರೀಕ್ಷೆ(SSLC Exam 2021)ಯ ಎಲ್ಲಾ ಮಾದರಿ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ರಿಲೀಸ್​ ಮಾಡಿದೆ. ಮಾದರಿ ಪ್ರಶ್ನೆಪತ್ರಿಕೆಯೂ ವೆಬ್ ಸೈಟ್ ನಲ್ಲಿ ಬಿಡುಗಡೆಗೊಂಡಿದೆ. ಎರಡು ದಿನದ ಹಿಂದೆ ಕೋರ್​ ಸಬ್ಜೆಕ್ಟ್​ ನ ಮಾದರಿ ಪ್ರಶ್ನೆ ಪತ್ರಿಕೆ ರಿಲಿಸ್​ ಆಗಿತ್ತು. ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯೂ ಸಹ ಬಿಡುಗಡೆಯಾಗಿದೆ. ಅದರಂತೆ ಇದೀಗ ಎಲ್ಲಾ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಆಗಿದೆ. 


ಇದನ್ನೂ ಓದಿ : 2nd PUC Result 2021 : ದ್ವಿತೀಯ PU ಫಲಿತಾಂಶ ಗ್ರೇಡ್ ಬದಲು ಮಾರ್ಕ್ಸ್ ನೀಡಲು ನಿರ್ಧಾರ!


ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆ(Education Department Karnataka)ಯ ವೆಬ್ ಸೈಟ್ www.sslc.Karnataka.gov.in ನಲ್ಲಿ ಪ್ರಕಟಗೊಂಡಿದೆ. ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ ಪತ್ರಿಕೆ ಬಿಡುಗಡೆಯಾಗಿದೆ. ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ನ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಮಾಡಲಾಗಿದೆ. 


ಇದನ್ನೂ ಓದಿ : Heavy Rain : ರಾಜ್ಯದಲ್ಲಿ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ 'ಆರೆಂಜ್-ಯೆಲ್ಲೋ' ಅಲರ್ಟ್!


ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆಪತ್ರಿ(Question Paper)ಕೆಳಿಗೆ ಮೂರು ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹುಆಯ್ಕೆ ಆಗಿದ್ದು, ಉತ್ತರಗಳನ್ನು ಓ ಎಂ ಆರ್ ಶೀಟ್ ನಲ್ಲಿ ನಮೂದಿಸಬೇಕು. OMR ಶೀಟ್ ಮಾದರಿಯೂ ಪ್ರಕಟಗೊಂಡಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಘೋಷಣೆ ಸಾಧ್ಯತೆ ಇದೆ.


ಇದನ್ನೂ ಓದಿ : ಕನ್ನಡ ಭಾಷೆಯನ್ನು ಕಡೆಗಣಿಸಿದ ಲೋಕಸಭಾ ಸಚಿವಾಲಯ...!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.