ಬೆಂಗಳೂರು : ರಾಜ್ಯದಲ್ಲಿ ಎರಡನೇ ಅಲೆ ತಾಂಡವಾಡುತ್ತಿರುವ ಹಿನ್ನಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್​ಎಸ್​ಎಲ್​ಸಿ  ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ದಿನೆ ದಿನೆ ಹೆಚ್ಚುತ್ತಿರುವ ಕೊರೋನಾ(Corona) ಪ್ರಕರಣಗಳು ಕಾರಣದಿಂದ ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ 19 ಎರಡನೇ‌ ಅಲೆಯ ಸಂಪೂರ್ಣ ತಹಬಂದಿಗೆ ಬಂದ ನಂತ್ರ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ : ರಾಜ್ಯ ಸರ್ಕಾರ ಕೂಡಲೇ ಬಡವರಿಗೆ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ-ಸಿದ್ಧರಾಮಯ್ಯ


ಪರೀಕ್ಷೆ(SSLC Exam 2021) ಮುಂದೂಡಿದ ಹಿನ್ನಲೆ ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. 


ಇದನ್ನೂ ಓದಿ : Heavy Rain : ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 3 ದಿನ ಭಾರೀ ಮಳೆ..!


ಜೂನ್ 14ರಿಂದ ಜೂನ್​ 25ರವರೆಗೂ ಹತ್ತನೇ ತರಗತಿ ಪರೀಕ್ಷೆಗಳು(SSLC Exams) ನಿಗದಿ ಪಡಿಸಿ, ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಆದರೆ, ಸೋಂಕು ಹೆಚ್ಚುತ್ತಿರುವ ಹಿನ್ನಲೆ ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಹಾಗೆಯೇ ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಹೂಡಿರುವ ಹಿನ್ನಲೆ ಈ ಕ್ರಮಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : ಹರಿಯುವ ನೀರಲ್ಲಿ ಕರೋನಾ ಹರಡುತ್ತಾ..? ತಜ್ಞರ ಉತ್ತರ ಏನು..?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.