SSLC Exam Postponed : ಜೂನ್‌ 21ರಿಂದ ನಡೆಯಬೇಕಿದ್ದ 'SSLC ಪರೀಕ್ಷೆ' ಮತ್ತೆ ಮುಂದೂಡಿಕೆ!

ಕೋವಿಡ್ 2ನೇ ಅಲೆಯು ವ್ಯಾಪಿಸಿರುವ ಕಾರಣದಿಂದ ಪರೀಕ್ಷೆಯನ್ನು ಮುಂದೂಡಿಕೆ

Last Updated : Jun 14, 2021, 05:06 PM IST
  • ಜೂ. 21 ರಿಂದ ಜು. 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ
  • ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು
  • ಕೋವಿಡ್ 2ನೇ ಅಲೆಯು ವ್ಯಾಪಿಸಿರುವ ಕಾರಣದಿಂದ ಪರೀಕ್ಷೆಯನ್ನು ಮುಂದೂಡಿಕೆ
SSLC Exam Postponed : ಜೂನ್‌ 21ರಿಂದ ನಡೆಯಬೇಕಿದ್ದ 'SSLC ಪರೀಕ್ಷೆ' ಮತ್ತೆ ಮುಂದೂಡಿಕೆ! title=

ಬೆಂಗಳೂರು : ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌

ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Exam 2021)ಯನ್ನ ಮುಂದೂಡಿಕೆ ಮಾಡಲಾಗದೆ. ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : BJP Core Committee Meeting : ರಾಜ್ಯ 'ಬಿಜೆಪಿ ಕೋರ್ ಕಮಿಟಿ' ಸಭೆಗೆ ದಿನಾಂಕ ಫಿಕ್ಸ್!

ಈ ಕುರಿತಂತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಆರೋಗ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಪತ್ರ ಬರೆದಿದ್ದು, 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ 21 ರಿಂದ ಜುಲೈ 5 ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದ್ರೆ, ಕೋವಿಡ್-19 2ನೇ ಅಲೆ(Covid-19 Second Wave)ಯು ವ್ಯಾಪಿಸಿರುವ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದರಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ 2 ದಿನಗಳಿಗೆ ಸೀಮಿತಗೊಳಿಸಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ!

ಎಲ್ಲಾ ರೀತಿಯ ಸುರಕ್ಷತಾ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Exam)ಯನ್ನು ಯಶಸ್ವಿಯಾಗಿ ನಡೆಸಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯದ ಸುಮಾರು 6 ಸಾವಿರ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರಿಗೆ ಆರೋಗ್ಯದ ಹಿತದೃಷ್ಠಿಯಿಂದ ಮತ್ತು ಇವರುಗಳಲ್ಲಿ ಆತ್ಮಸ್ಥೈರ್ಯ ತುಂಬಿ, ಕರ್ತವ್ಯ ನಿರ್ವಹಿಸಲು ಅನುವಾಗಲು ಕೋವಿಡ್-19 ಲಸಿಕೆಯನ್ನು ಹಾಕುವುದು ಅತ್ಯಾವಶ್ಯಕ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : BS Yediyurappa : 'ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News