SSLC EXam 2023: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಸುಸುತ್ರವಾಗಿ ಪರೀಕ್ಷೆ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
2022-23ನೇ ಸಾಲಿನ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಶಾಲಾ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ. ಖಾಸಗಿ ಅಭ್ಯರ್ಥಿಗಳು 18,272. ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,862 ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ರಾಜ್ಯದ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಪರೀಕ್ಷೆಗಳು ನಡೆಯಲಿದೆ. ಪ್ರತಿ ವಿಷಯಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 1.45ಕ್ಕೆ ಮುಕ್ತಾಯವಾಗಲಿದೆ.
ಇದನ್ನೂ ಓದಿ- "ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣಾ ಸರಕು"-ಬಿಜೆಪಿ ವಿರುದ್ದ ಸಿದ್ಧು ಕಿಡಿ
ಪರೀಕ್ಷೆಗಳನ್ನು ಸುಸುತ್ರವಾಗಿ ನಡೆಸಲು ಈಗಾಗಲೇ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಿದೆ. ಮೊಬೈಲ್ ಫೋನ್, ಸ್ಮಾರ್ಟ್ ಫೋನ್, ಸ್ಮಾಟ್ವಾಚ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಸಹ ಮೊಬೈಲ್ ಪೋನ್ಗಳನ್ನು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಸುಳ್ಳು ವದಂತಿಗಳಿಗೆ ಕಿವಿ ಕೊಡದೇ ನಿರ್ಭೀತಿ, ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದೆ.
ಇದನ್ನೂ ಓದಿ- ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ?
2022-23ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಎಸ್ಎಸ್ಎಲ್ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.