ಬೆಂಗಳೂರು: ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಸಲಾಗಿದ್ದ 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಎಪ್ರಿಲ್ ಕೊನೆಯ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೇ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಏಪ್ರಿಲ್ 10 ರಿಂದ 230 ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು, ಅದಕ್ಕಾಗಿ ಒಟ್ಟು 77,754 ಮೌಲ್ಯಮಾಪಕರನ್ನು ನಿಯೋಜಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದೆ.


ಮೌಲ್ಯಮಾಪನ ಮಾಡಿದ ಕೂಡಲೇ ಆನ್‌ಲೈನ್‌ ಪೋರ್ಟಿಂಗ್‌ ಮೂಲಕ ಅಂಕಗಳನ್ನು ನಮೂದಿಸುವುದರಿಂದ ಮೌಲ್ಯಮಾಪನ ಪ್ರಕ್ರಿಯೆ ಮುಗಿದ ಕೂಡಲೇ ಫ‌ಲಿತಾಂಶ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.