ಬೆಂಗಳೂರು: 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 7 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಇಂದು (ಶುಕ್ರವಾರ) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದ್ದು, ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ. ಈ ಬಾರಿ ಒಟ್ಟು 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ. 2.73 ರಷ್ಟು ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. 2817 ಪರೀಕ್ಷಾ ಕೇಂದ್ರಗಳಲ್ಲಿ 51 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಇದೇ 16ರಿಂದ 25ರ ವರೆಗೆ ಮೌಲ್ಯಮಾಪನ ನಡೆಯಲಿದೆ’ ಎಂದು ತನ್ವೀರ್  ಸೇಠ್‌ ಮಾಹಿತಿ ನೀಡಿದರು.


ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ.7 ರಂದು ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ನಂತರ ಮೇ.8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸಲಾಗುವುದು. ಮೇ 8 ರಿಂದ 10ರ ವರೆಗೂ ಕೀ ಉತ್ತರ, ಪ್ರಶ್ನೆ ಪತ್ರಿಕೆ, ಫಲಿತಾಂಶಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು. 


ಕಳೆದ ಬಾರಿ ಶೇ. 73.47 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ಇನ್ನೂ ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂಡು ತನ್ವೀರ್ ಸೇಠ್‌ ತಿಳಿಸಿದರು.