ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಮೇ 2ರಂದು ಪ್ರಕಟಿಸಲಾಗುವುದು ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಹಿತಿ ನೀಡಿರುವ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಅವರು, ಮೇ 2 ರಂದು ರಾಜ್ಯಾದ್ಯಂತ ಎಸ್​​ಎಸ್​ಎಲ್​ಸಿ ಪರಿಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್​​  www.kaceb.kar.nic.in ಮತ್ತು www.karresults.nic.inನಲ್ಲಿ ಫಲಿತಾಂಶ ಪ್ರಕಟ ಆಗಲಿದ್ದು, ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಫಲಿತಾಂಶ ಪಡೆಯಬಹುದು. ಮರುದಿನ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳ ಪೋಷಕರ ಮೊಬೈಲ್ ನಂಬರ್ ಗೆ ಸಹಾ ಸಂದೇಶ ಕಳುಹಿಸಲಾಗುವುದು ಎಂದು ಹೇಳಿದರು. 


ಮಾರ್ಚ್​ 21 ರಿಂದ ಏಪ್ರಿಲ್​ 4 ರವರೆಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ  8,41,666 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದರು.