PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ದ್ವಿತೀಯ PUC ಫಲಿತಾಂಶಕ್ಕೆ SSLC ಅಂಕವೂ ಪರಿಗಣನೆ!
ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ
ಬೆಂಗಳೂರು : ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು. ಆದ್ರೇ.. ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನ ಸಂದರ್ಭದಲ್ಲಿ, ದ್ವಿತೀಯ ಪಿಯು(II PUC) ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು, ಹಾಗೂ ಹೆಚ್ಚು ನ್ಯಾಯಯುತವಾಗಲು ಈ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : Heavy Rainfall : ಇನ್ನೆರಡು ದಿನ ರಾಜ್ಯದೆಲ್ಲೆಡೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'
ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(Karnataka Secondary Education Examination Board)ಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು, ಪ್ರಥಮ ಪಿಯು ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಿ ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ : 'KSRTC' ಟ್ರೇಡ್ ಮಾರ್ಕ್ ರದ್ದುಗೊಳಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ' ಹೇಳಿದ್ದೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ