SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ, ವಿದ್ಯಾರ್ಥಿನಿ ಸಾವು
SSLC Exam: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು.
SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಟಿ .ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಎಂಬ ವಿದ್ಯಾರ್ಥಿನಿ (Student) ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ- SSLC Exam: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ
ಮಾದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಶ್ರೀ, ಇಂದು ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯುತ್ತಿದ್ದರು. ಈ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಸಿಬ್ಬಂದಿಗಳು ಕೂಡಲೇ ಟಿ. ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ- CET Exam: ಜೂನ್ ತಿಂಗಳಲ್ಲಿ ಸಿಇಟಿ ಪರೀಕ್ಷೆ
ಮಗಳು ತನ್ನ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಹೋಗಿದ್ದಾಳೆ. ಚೆನ್ನಾಗಿ ಪರೀಕ್ಷೆ ಬರೆದು ಹಿಂದಿರುಗುತ್ತಾಳೆ ಎಂದು ಕಾಯುತ್ತಿದ್ದ ಪೋಷಕರಿಗೆ ಮಗಳ ಈ ಸುದ್ದಿ ತಿಳಿದು ಸಿಡಿಲು ಬಡಿದಂತಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.