ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಯಡಿ ಕ್ರಮ ಆಗುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.ಎಸ್ ಟಿ ಎಸ್ ನಡೆ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಕಾನೂನಾತ್ಮಕ ಕ್ರಮಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ. 


COMMERCIAL BREAK
SCROLL TO CONTINUE READING

ಇದೇ ವಿಚಾರವಾಗಿ ಕಾಂಗ್ರೆಸ್ ಶಾಸಕ ಎ.ಎಸ್ ಪೊನ್ನಣ್ಣ ಮಾತನಾಡಿ,  ಇದು ಒಪನ್ ಬ್ಯಾಲಟ್ ಆಗಿದೆ. ಇಲ್ಲಿ ವಿಪ್ ಜಾರಿ ಮಾಡೋಕೆ ಆಗೋದಿಲ್ಲ. ಇಂಥವರಿಗೆ ಮತ ಹಾಕಿ ಎಂದು ಮನವಿ ಮಾಡಬಹುದು ಅಷ್ಟೇ ಎಂದರು.


ಇದನ್ನೂ ಓದಿ- ಬಿಬಿಎಂಪಿ : ಘನತ್ಯಾಜ್ಯ ನಿರ್ವಹಣೆಗೆ ಕಾರ್ಯಕ್ಕೆ ಮತ್ತೆ ಟೆಂಡರ್


ಇಲ್ಲಿ ಇಂತವರಿಗೆ ಮತ ಹಾಕಿ ಎಂದು ಕಡ್ಡಾಯ ಮಾಡಲು ಬರುವುದಿಲ್ಲ.ಹಾಗಾಗಿ ಅಡ್ಡ ಮತದಾನದಿಂದ ಶಾಸಕರಿಗೆ ಯಾವುದೇ ಸಮಸ್ಯೆ ಆಗಲ್ಲ. ಈ ಕುರಿತಾಗಿ ಸುಪ್ರೀಂಕೋರ್ಟ್ ನಲ್ಲಿ ಹಲವು ಉದಾಹರಣೆಗಳಿವೆ.ಖುಷ್ವಂತ್ ಸಿಂಗ್ ಪ್ರಕರಣದಲ್ಲಿ ಉಲ್ಲೇಖವಾಗಿದೆ ಎಂದರು.ಇಲ್ಲಿ ಚಿಹ್ನೆಗಳು ಸಹ ಇರೋದಿಲ್ಲ.ಇದು ಪಕ್ಷಾಧಾರಿತ ಚುನಾವಣೆ ಅಲ್ಲ.ಅನರ್ಹತೆ ಆಗಲಿ ಪಕ್ಷಾಂತರ ನಿಷೇಧ ಕಾಯಿದೆ ಆಗಲಿ ಅನ್ವಯಿಸೋದಿಲ್ಲ ಎಂದು ತಿಳಿಸಿದರು. 


ಇದನ್ನೂ ಓದಿ- ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ


ಇನ್ನು ಬಿಜೆಪಿ ಎಸ್ ಟಿ ಸೋಮಶೇಖರ್ ವಿರುದ್ಧ ಸ್ಪೀಕರ್ ಗೆ ದೂರು ನೀಡುವ ಸಾಧ್ಯತೆ ಇದೆ.ಅಥವಾ ಪಕ್ಷದಿಂದ ಉಚ್ಛಾಟನೆ ಮಾಡುವ ಸಾಧ್ಯತೆ ಇದೆ.ಅದರ ಹೊರತಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಅವಕಾಶ ಕಡಿಮೆ ಇದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.