ಬೆಂಗಳೂರು: ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
"ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಜನ ಮೃತಪಟ್ಟಿದ್ದು, 11-12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ, ಶಾಂತರಾಗಿ ಸಹಕಾರ ನೀಡಬೇಕು. ಆರ್ ಸಿಬಿ ತಂಡದ ಸಂಭ್ರಮಾಚಾರಣೆಯನ್ನು 10 ನಿಮಿಷಕ್ಕೆ ಮೊಟಕುಗೊಳಿಸಲಾಗಿದೆ" ಎಂದು ತಿಳಿಸಿದರು.
ಇದನ್ನೂ ಓದಿ : ಉತ್ತಮ ಆರೋಗ್ಯಕ್ಕಾಗಿ ಬೆಳಗ್ಗೆ ಚಹಾ ಬದಲು ಈ 4 ಪಾನೀಯಗಳನ್ನು ಕುಡಿಯಿರಿ..!
"ಮೆಟ್ರೋಗಳಲ್ಲೂ ಜನದಟ್ಟಣೆ ಹೆಚ್ಚಾಗಿದೆ. ಪೊಲೀಸರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದರು. ಆದರೆ ಅನಿರೀಕ್ಷಿತವಾಗಿ ಜನ ಸೇರಿದ್ದಾರೆ" ಎಂದು ತಿಳಿಸಿದರು. ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, "ಅವರ ಆಡಳಿತ ಅವಧಿಯಲ್ಲಿದ್ದ ಪೊಲೀಸರೇ ಈಗಲೂ ಇದ್ದಾರೆ" ಎಂದು ತಿಳಿಸಿದರು.
ಮೃತರಿಗೆ ಸಂತಾಪ
ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಶಿವಕುಮಾರ್ ಅವರು, "ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ" ಎಂದು ಮನವಿ ಮಾಡಿದರು.
ರಾಜ್ಯಕ್ಕೆ ಹೆಮ್ಮೆ ತಂದ ಆರ್ ಸಿಬಿ ತಂಡಕ್ಕೆ ಜನರ ಪರವಾಗಿ ಅಭಿನಂದನೆಗಳು
ಇದಕ್ಕೂ ಮುನ್ನ ಸದಾಶಿವನಗರ ನಿವಾಸ ಹಾಗೂ ಕನಕಪುರದಲ್ಲಿ ಮಾಧ್ಯಮಗಳು, ಆರ್ ಸಿಬಿ ತಂಡ ಐಪಿಎಲ್ ಟೂರ್ನಿ ಗೆದ್ದಿರುವ ಬಗ್ಗೆ ಕೇಳಿದಾಗ, "ನಮ್ಮ ಆರ್ ಸಿಬಿ ತಂಡ ಐಪಿಎಲ್ ಟೂರ್ನಿಯನ್ನು ಗೆದ್ದಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ರಾಜ್ಯದ ಜನರ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದು ಶುಭಕೋರಿದರು.
"ಕಳೆದ 18 ವರ್ಷಗಳಿಂದ ಆರ್ ಸಿಬಿ ತಂಡ ಈ ಟ್ರೋಫಿ ಗೆಲ್ಲಲು ಬಹಳಷ್ಟು ಪ್ರಯತ್ನ ಮಾಡಿದ್ದರು. ಎಷ್ಟೇ ಕಷ್ಟ ಎದುರಾದರೂ ವಿರಾಟ್ ಕೊಹ್ಲಿ ನಮ್ಮ ತಂಡವನ್ನು ಬಿಡದೇ ತಂಡದ ಕಷ್ಟ ಹಾಗೂ ಸುಖದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಇದೊಂದು ವಿಶೇಷ ಸಂದರ್ಭ" ಎಂದು ತಿಳಿಸಿದರು.
ಇದನ್ನೂ ಓದಿ : ಉತ್ತಮ ಆರೋಗ್ಯಕ್ಕಾಗಿ ಬೆಳಗ್ಗೆ ಚಹಾ ಬದಲು ಈ 4 ಪಾನೀಯಗಳನ್ನು ಕುಡಿಯಿರಿ..!
ವಿರಾಟ್ ಕೊಹ್ಲಿ ಭಾವುಕರಾದ ಬಗ್ಗೆ ಕೇಳಿದಾಗ, "ಕಣ್ಣೀರು ದುಃಖಕ್ಕೂ ಬರಿತ್ತದೆ, ಸಂತೋಷಕ್ಕೂ ಬರುತ್ತದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ನಾನು ಐಪಿಎಲ್ ಅನ್ನು ನೋಡುತ್ತಾ ಬಂದಿದ್ದೇನೆ. ಫೈನಲ್ ಪಂದ್ಯ ವೀಕ್ಷಿಸಲು ನನ್ನ ಸ್ನೇಹಿತರು ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ನಾನು ಹೋಗಲು ಆಗಲಿಲ್ಲ" ಎಂದು ತಿಳಿಸಿದರು.
ಸುರಕ್ಷತೆ ದೃಷ್ಟಿಯಿಂದ ಮೆರವಣಿಗೆ ರದ್ದು
ಸರ್ಕಾರದಿಂದ ಸನ್ಮಾನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, "ಆರ್ ಸಿಬಿ ತಂಡದವರು ತೆರೆದ ವಾಹನದಲ್ಲಿ ಪರೇಡ್ ನಡೆಸಲು ಮನವಿ ಮಾಡಿದ್ದರು. ಆದರೆ ಕಾನೂನು ಸುವ್ಯವಸ್ಥೆ, ತಂಡದ ಆಟಗಾರರು ಹಾಗೂ ಜನರ ಸುರಕ್ಷತೆ ಹಿನ್ನೆಲೆಯಲ್ಲಿ ನಾನು ಹಾಗೂ ಸಿಎಂ ಚರ್ಚೆ ಮಾಡಿದ್ದು ಪೊಲೀಸರು ಮೆರವಣಿಗೆಗೆ ಅನುಮತಿ ನೀಡಿಲ್ಲ" ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









