"ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ"

ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Jan 2, 2024, 08:44 PM IST
  • ಸ್ವತಂತ್ರ ಭಾರತದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಅವುಗಳ ಉಳಿವಿಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ ಪಕ್ಷ.
  • ನಾವು ಕಟ್ಟಿದ ಸಂಸ್ಥೆಯನ್ನು ಮಾರಲು ಅಥವಾ ಭ್ರಷ್ಟಾಚಾರದ ಮೂಲಕ ಕುಟುಂಬದ ಆಸ್ತಿಗಳಿಸುವುದೇ ಬಿಜೆಪಿಯವರ ಏಕೈಕ ಉದ್ದೇಶ.
  • ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು ಎಂದರು
"ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ" title=

ಬೆಂಗಳೂರು: ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್‌ರಂತಹ ಭ್ರಷ್ಟರ ಕೈಗೆ ಸಿಕ್ಕಿ ನಲುಗಿ ಹೋಗಿದ್ದ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ನಮ್ಮ ಸರ್ಕಾರದ ಪ್ರಾಮಾಣಿಕ ಕಾಳಜಿಯಿಂದಾಗಿ ನಲವತ್ತು ವರ್ಷಗಳಲ್ಲೇ ಹೊಸ ದಾಖಲೆ ಬರೆದಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kaatera Collections: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ ದರ್ಶನ್ ಅಭಿನಯದ 'ಕಾಟೇರ'.. ನಾಲ್ಕು ದಿನದ ಕಲೆಕ್ಷನ್ ಎಷ್ಟು?

ಕಾರ್ಮಿಕರ ಶ್ರಮದಲ್ಲಿ ಸಂಸ್ಥೆ ಬೆಳೆಸಬೇಕಿದ್ದವರು ಕುಟುಂಬದ ಆಸ್ತಿ ಸಂಪಾದನೆಗೆ ಇಳಿದರೆ ಲಾಭದಲ್ಲಿದ್ದ ಸಂಸ್ಥೆ ಹೇಗೆ ಅವಸಾನದತ್ತ ಸರಿಯುತ್ತದೆಂಬುದಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಸ್‌ಡಿಎಲ್ ಸಾಗಿದ ಹಾದಿ ಉದಾಹರಣೆ.ಅದೇ ಕೆಎಸ್‌ಡಿಎಲ್ ಇಂದು ಹೊಸ ರೂಪದೊಂದಿಗೆ ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: Sevasindhu Application Guide; ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆಯಿರಿ

ಸ್ವತಂತ್ರ ಭಾರತದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಅವುಗಳ ಉಳಿವಿಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ ಪಕ್ಷವೇ.ನಾವು ಕಟ್ಟಿದ ಸಂಸ್ಥೆಯನ್ನು ಮಾರಲು ಅಥವಾ ಭ್ರಷ್ಟಾಚಾರದ ಮೂಲಕ ಕುಟುಂಬದ ಆಸ್ತಿಗಳಿಸುವುದೇ ಬಿಜೆಪಿಯವರ ಏಕೈಕ ಉದ್ದೇಶ. ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News