ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ  ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಚುನಾವಣಾ ದಿನಾಂಕವನ್ನು ಪ್ರಕಟಿಸಿದ ನಂತರ ನೀತಿ ಸಂಹಿತೆ ಜಾರಿಯಾಗಲಿದೆ.


COMMERCIAL BREAK
SCROLL TO CONTINUE READING

224 ಸದಸ್ಯರನ್ನು ಒಳಗೊಂಡಿರುವ ರಾಜ್ಯ ವಿಧಾನಸಭೆಯ ಅಧಿಕಾರವು ಮೇ 28ಕ್ಕೆ ಕೊನೆಗೊಳ್ಳಲಿದ್ದು, ಮೇ ಎರಡನೇ ವಾರದಲ್ಲಿ ಚುನಾವಣೆ ದಿನಾಂಕ ನಿಗದಿ ಗೊಳಿಸುವ ಸಾಧ್ಯತೆ ಇದೆ. 


ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರಿದೆ. ಪ್ರಮುಖ ಪಕ್ಷಗಳಲ್ಲಿ ರಾಜಕೀಯ ಬಿಸಿ ಕಾವೇರುತ್ತಿದೆ. 2013 ರಲ್ಲಿ, 122 ಸ್ಥಾನಗಳನ್ನು ಗೆದ್ದುಕೊಂಡು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಎರಡನೇ ಅವಧಿಗೆ ಮುಂದುವರೆಯುವ ವಿಶ್ವಾಸ ವ್ಯಕ್ತಪಡಿಸುತ್ತಿದೆ. ಇನ್ನು ಪ್ರಸ್ತುತ 20 ರಾಜ್ಯಗಳಲ್ಲಿ ತನ್ನ ಅಧಿಕಾರ ಹೊಂದಿರುವ ಕೇಸರಿ ವಿಂಗ್ 21 ನೇ ರಾಜ್ಯದಲ್ಲಿ ಕಮಲ ಅರಳಿಸುವ ಅಭಿಲಾಷೆ ಹೊಂದಿದೆ. ಪ್ರಾದೇಶಿಕ ಪಕ್ಷಕ್ಕೆ ಜನ ಮಾನ್ಯತೆ ನೀಡುತ್ತಾರೆ, ಈ ಬಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಜಾತ್ಯಾತೀತ ಜನತಾದಳ(ಜೆಡಿಎಸ್) ವಿಶ್ವಾಸ ಹೊಂದಿದೆ.