ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯು ಏಪ್ರಿಲ್ ಕೊನೆ ಅಥವಾ ಮೇ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣೆಗೆ ಸಂಬಂಧಿಸಿದ ರೂಪುರೇಷೆಗಳನ್ನು ಸಿದ್ದಪಡಿಸಲು ಕೇಂದ್ರ ಚುನಾವಣಾ ಆಯುಕ್ತರು ಮಾರ್ಚ್ ಕೊನೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡಿ ಇಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಅಂತಿಮ ದಿನಾಂಕ ವನ್ನು ನಿಗಧಿಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣೆಯ ದಿನಾಂಕ ನಿಗದಿಯಾದ ತಕ್ಷಣ ರಾಜ್ಯದಲ್ಲಿ ಕನಿಷ್ಠ ಒಂದು ತಿಂಗಳವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಆಯೋಗ ತಿಳಿಸಿದೆ.
ಬರುವ ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಅವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಹೊಸದಾಗಿ 224 ವಿಧಾನಸಭಾ ಸದಸ್ಯರನ್ನು ಆಯ್ಕೆ ಮಾಡಲು ಈ ಚುನಾವಣೆ ನಡೆಯಲಿದೆ.