ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ..!

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ

Last Updated : Nov 21, 2020, 03:38 PM IST
  • ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ
  • ರಾಜ್ಯ ನಾಯಕರ ಜೊತೆ ಚರ್ಚೆ ನಡೆಸುವವರೆಗೂ ಸಂಪುಟ ವಿಸ್ತರಣೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ
  • ನವೆಂಬರ್ ನಲ್ಲಿ ಸಂಪುಟ ವಿಸ್ತರಣೆ ಅನುಮಾನ
ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ..! title=

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಹೀಗಾಗಿ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದ್ದು, ಇನ್ನು ಹಲವು ದಿನ ಕಾಯಲೇಬೇಕಾದ ಅನಿವಾರ್ಯ ಸ್ಥಿತಿ ಬಂದು ಒದಗಿದೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ(BJP) ಹೈಕಮಾಂಡ್ ಮತ್ತೊಮ್ಮೆ ಚರ್ಚೆ ನಡೆಸಲಿದ್ದು, ಅಲ್ಲದೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸುವವರೆಗೂ ಸಂಪುಟ ವಿಸ್ತರಣೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇಲ್ಲ. ಹೀಗಾಗಿ ನವೆಂಬರ್ ನಲ್ಲಿ ಸಂಪುಟ ವಿಸ್ತರಣೆ ಅನುಮಾನವಾಗಿದೆ.

'ಪಕ್ಷ ತೊರೆದು ಬಂದ ನಮ್ಮ ಮಿತ್ರರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ'

ಅಲ್ಲದೇ ಡಿ.4 ಹಾಗೂ 5ರಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅರುಣ್ ಸಿಂಗ್ ಭಾಗಿಯಾಗುವ ಸಾಧ್ಯತೆಯಿದೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಅಂತಿಮ ಚರ್ಚೆ ನಡೆದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ನವೆಂಬರ್ ಬದಲಾಗಿ ಡಿಸೆಂಬರ್ ನಲ್ಲಿ ನಡೆಯಬಹುದು ಎಂಬ ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ಕೇಳಿಬಂದಿದೆ.

ಗ್ರಾ.ಪಂ ಚುನಾವಣೆ ಗೆಲ್ಲಲು ಬಿಜೆಪಿಯಿಂದ 'ಪಂಚರತ್ನ' ಸೂತ್ರ..!

Trending News