ರಾಜ್ಯ ಸಿವಿಲ್​ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ತಡೆ

‌ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. 2024ರ ನವೆಂಬರ್ 25ರ ಸುತ್ತೋಲೆಯನ್ನು ಉಲ್ಲಂಘಿಸಿ ಕೆಲವು ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್ 28ರ ನಂತರದ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ರದ್ದುಗೊಳಿಸಲು ಸರ್ಕಾರ ಸೂಚಿಸಿದೆ.

Written by - Puttaraj K Alur | Last Updated : Apr 11, 2025, 11:53 PM IST
  • ರಾಜ್ಯ ಸಿವಿಲ್​ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ತಡೆ
  • ಕೆಲ ನೇಮಕಾತಿ ಪ್ರಾಧಿಕಾರಗಳಿಂದ ಸೂಚನೆ ಉಲ್ಲಂಘಿಸಿ ನೇರನೇಮಕಾತಿಗೆ ಹೊಸ ಅಧಿಸೂಚನೆ
  • ಯಾವುದೇ ಹೊಸ ಅಧಿಸೂಚನೆ ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದು
ರಾಜ್ಯ ಸಿವಿಲ್​ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ತಡೆ

State Civil Service: ರಾಜ್ಯ ಸಿವಿಲ್​ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು 2024ರ ನವೆಂಬರ್​ 25ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Add Zee News as a Preferred Source

ಇದನ್ನೂ ಓದಿ: ಸಂಪುಟ ಸಭೆ: ಜಾತಿ ಗಣತಿ ವರದಿ ಬಿಡುಗಡೆ: 40% ಕಮಿಷನ್ ಆರೋಪಕ್ಕೆ ಎಸ್‌ಐಟಿ ರಚನೆ

ಕೆಲವು ನೇಮಕಾತಿ ಪ್ರಾಧಿಕಾರಿಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ 2024ರ ನವೆಂಬರ್​ 28ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ಜಾತಿ ಗಣತಿ ವರದಿ ಕ್ಯಾಬಿನೆಟ್‌ನಲ್ಲಿ ತರುವ ವಿಚಾರ

ಈ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವೀಟ್​ ಮಾಡಿದ್ದು, “ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದೆ. ಇದರನ್ವಯ ದಿನಾಂಕ 28-10-2024ರ ನಂತರ ನೇರ ನೇಮಕಾತಿಗಾಗಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News