ಮೈಸೂರು : ರಾಜ್ಯ ಚುನಾವಣಾ ಆಯೋಗ ಹಲ್ಲುಕಿತ್ತ ಹಾವಿನಂತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಣತಿಯಂತೆ ರಾಜ್ಯ ಚುನಾವಣಾ ಆಯೋಗ ವರ್ತಿಸುತ್ತಿದೆ ಎಂದು ಜೆಡಿಎಸ್ ರಾಜ್ಯಾದ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಚುನಾವಣೆ ಆಯೋಗ ಹಲ್ಲು ಕಿತ್ತ ಹಾವಿನಂತೆ ಕಾಣಿಸುತ್ತಿದೆ. ರಾಜ್ಯ ಚುನಾವಣಾ ಆಯೋಗ ಸಿದ್ದರಾಮಯ್ಯರ ಅಣತಿಯಂತೆ ವರ್ತಿಸುತ್ತಿದೆ. ಗೃಹ ಸಚಿವರಿಗೆ ಸಲಹೆಗಾರರಾಗಿರುವ ಕೆಂಪಯ್ಯ ಚುನಾವಣಾ ಆಯೋಗಕ್ಕೆ ಮೀರಿದ ಶಕ್ತಿ ಹೊಂದಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಾಣಾ ಆಯೋಗಕ್ಕೆ ದೂರು ಕೊಡಲು ತೀರ್ಮಾನಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.


ಮುಂದುವರೆದು ಮಾತನಾಡಿದ ಅವರು, 2006ರ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಇದ್ದ ಮುಖಂಡರು ಈಗಿಲ್ಲ. ಸಿದ್ದರಾಮಯ್ಯ ಅವರು ಒಬ್ಬೊಬ್ಬರನ್ನಾಗಿಯೇ ತಮ್ಮ ಒಡನಾಟದಿಂದ ಕತ್ತರಿಸಿಕೊಂಡು ಬಂದಿದ್ದಾರೆ. ಆಗ ಸಿದ್ದರಾಮಯ್ಯ ಜತೆ ಇದ್ದ ಶ್ರೀನಿವಾಸ್ ಪ್ರಸಾದ್, ಅಂಬರೀಶ್, ಎಸ್.ಎಂ.ಕೃಷ್ಣ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಅವರಿಂದ ದೂರ ಉಳಿದಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಅವರ ದುರಹಂಕಾರವೇ ಕಾರಣ ಎಂದು ಕುಮಾರಸ್ವಾಮಿ ಟೀಕಿಸಿದರು.